ಕಲಬುರಗಿ: ಬಿಜೆಪಿ ನಾಯಕ ಮಣಿಕಂಠ ರಾಠೋಡ್ ಬಂಧನ

Update: 2023-07-15 18:59 GMT

ಕಲಬುರಗಿ: ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ ಬಿಜೆಪಿ ಬಿಜೆಪಿ ನಾಯಕ ಮಣಿಕಂಠ ರಾಠೋಡ್‌ನನ್ನು ಶುಕ್ರವಾರ ಚಿತ್ತಾಪುರ ಪೊಳೀಸರು ಬಂಧಿಸಿರುವುದು ವರದಿಯಾಗಿದೆ. 

ಪೊಲೀಸರು ರಾತ್ರೋರಾತ್ರಿ ಬಂಧಿಸಿ ಕರೆದೊಯ್ದಿದ್ದು ರಾತ್ರಿಯೇ ರಾಠೋಡ್‌ ಸ್ವೇಶನ್‌ ಜಾಮೀನು ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. 

ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಸೇರಿದಂತೆ ಅನೇಕ ಕಡೆಗಳಲ್ಲಿ ಕೂಲೆಯತ್ನ, ಕೂಲೆ ಬೆದರಿಕೆ, ಅಪಹರಣ, ಹಲ್ಲೆ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಕ್ರಿಮಿನಲ್‌ ಪ್ರಕರಣಗಳಲ್ಲಿ ಮಣಿಕ೦ಠ ರಾಠೋಡ್‌ ಹೆಸರು ಇದೆ. ಚುನಾವಣೆ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಜೀವಬೇದರಿಕೆ ಹಾಕಿರುವ ಆಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಚಿತ್ತಾಪುರ ಪೊಲೀಸರು ಮಣಿಕಂಠ ರಾಠೋಡನನ್ನು ಬಂಧಿಸಿದ್ದರು ಎಂದು ತಿಳಿದು ಬಂದಿದೆ. 

ಗಡಿಪಾರು ಆಗಿದ್ದ ಮಣಿಕಂಠ ರಾಠೋಡ್ 

ಅಕ್ಕಿ ಅಕ್ರಮ ಸಾಗಾಣಿಕೆಯ ಆರೋಪ ಸೇರಿ ಯಾದಗಿರಿ, ವಿಜಯಪುರ, ಕಲಬುರಗಿ ಮೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಮಣಿಕಂಠ ರಾಠೋಡ ಒಂದು ವರ್ಷಗಳ ಕಾಲ ಗಡಿಪಾರು ಮಾಡಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ. ಎಸ್. ರವಿಕುಮಾರ ಆದೇಶ ಹೊರಡಿಸಿದ್ದರು. ಆದರೆ ಹೈಕೋರ್ಟ್‍ನಲ್ಲಿ ಮಣಿಕಂಠ ಗಡಿಪಾರು ಆದೇಶಕ್ಕೆ ತಡೆಯಾಜ್ಞೆ ಪಡೆದಿದ್ದಾರೆ.

ಈ ನಡುವೆ ವಿಧಾನಸಭೆ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ. ಆ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಜೀವಬೇದರಿಕೆ ಹಾಕಿರುವ ಆಡಿಯೋ ವೈರಲ್ ಆಗಿತ್ತು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News