ವಿಪಕ್ಷ ನಾಯಕನಾಗಲು ಯೋಗ್ಯನಾದ ಒಂದೇ ಒಂದು ಮನುಷ್ಯಾಕೃತಿ ಬಿಜೆಪಿಯಲ್ಲಿಲ್ಲ: ಕಾಂಗ್ರೆಸ್ ಲೇವಡಿ
ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಇನ್ನೂ ಮೀನಾ ಮೇಷ ಎಣಿಸುತ್ತಿರುವುದನ್ನು ಕಾಂಗ್ರೆಸ್ ಲೇವಡಿ ಮಾಡಿದೆ.
ಬಿಜೆಪಿಯಲ್ಲಿ ವಿಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
''ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಾಯಿ ತೆರೆದರೆ ಹೊಲಸು ಮಾತುಗಳು. ಆರ್ ಅಶೋಕ್ ಅವರಿಗೆ ತಾನೇನು ಮಾತಾಡುತ್ತೇನೆ ಎಂಬ ಅರಿವು ಅವರಿಗೇ ಇರುವುದಿಲ್ಲ. ಡಾ. ಅಶ್ವತ್ ನಾರಾಯಣ್ ಅವರಿಗೆ ಸದಾ ಗಂಡಸ್ಥನದ ಬಗ್ಗೆಯೇ ಚಿಂತೆ. ಬಸವರಾಜ್ ಬೊಮ್ಮಾಯಿ ಪ್ರತಾಪ್ ಸಿಂಹನನ್ನೇ ಎದುರಿಸಲಾಗದವರು ಸಿದ್ದರಾಮಯ್ಯರನ್ನು ಎದುರಿಸಲು ಸಾಧ್ಯವೇ!''ವಿಪಕ್ಷ ನಾಯಕನಾಗಲು ಯೋಗ್ಯನಾದ ಒಂದೇ ಒಂದು ಮನುಷ್ಯಾಕೃತಿ ಬಿಜೆಪಿಯಲ್ಲಿಲ್ಲ: ಕಾಂಗ್ರೆಸ್ ಲೇವಡಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
''ಬಿಜೆಪಿಯಲ್ಲಿ ಈಗ ಸೋಲಿನ ಆತ್ಮಾವಲೋಕನದ ಹೆಸರಲ್ಲಿ ಸಂತೋಷ ಕೂಟ ಹಾಗೂ BSY ಕೂಟದ ನಡುವೆ ಒಬ್ಬರನ್ನೊಬ್ಬರು ಸೋಲಿಸುವ ಅವಲೋಕನ ನಡೆಯುತ್ತಿದೆ. ಈ ಸೋಲಿನ ಅವಲೋಕನಾ ಸಭೆಗಳಿಗೆ ಜೋಶಿ, ಸಂತೋಷ್ ಅವರುಗಳು ಬಾಗವಹಿಸದೆ, ತಮ್ಮ ಶಿಷ್ಯಪಡೆಯನ್ನು ಮುಂದೆ ಬಿಟ್ಟಿರುವುದೇಕೆ? ಹೀನಾಯ ಸೋಲಿಗೆ ಅವರಿಬ್ಬರೇ ಕಾರಣರಲ್ಲವೇ, ಅವರೇ ಇಲ್ಲದಿದ್ದರೆ ಹೇಗೆ!?'' ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಬಿಜೆಪಿಯಲ್ಲಿ ವಿಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲ!@BasanagoudaBJP - ಬಾಯಿ ತೆರೆದರೆ ಹೊಲಸು ಮಾತುಗಳು.@RAshokaBJP - ತಾನೇನು ಮಾತಾಡುತ್ತೇನೆ ಎಂಬ ಅರಿವು ಅವರಿಗೇ ಇರುವುದಿಲ್ಲ.@drashwathcn - ಸದಾ ಗಂಡಸ್ಥನದ ಬಗ್ಗೆಯೇ ಚಿಂತೆ.@BSBommai - ಪ್ರತಾಪ್ ಸಿಂಹನನ್ನೇ ಎದುರಿಸಲಾಗದವರು…
— Karnataka Congress (@INCKarnataka) June 26, 2023