BJP ಲೀಡರ್ ಲೆಸ್, JDS ಪೀಪಲ್ ಲೆಸ್ ಪಾರ್ಟಿ: ಸಚಿವ ಪ್ರಿಯಾಂಕ್‌ ಖರ್ಗೆ

Update: 2023-11-03 07:05 GMT

ಮೈಸೂರು: ʼʼರಾಜ್ಯದಲ್ಲಿ ವಿಪಕ್ಷ ಎಲ್ಲಿದೆ?  ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಪಾರ್ಟಿಯಾಗಿದೆʼʼ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ವ್ಯಂಗ್ಯವಾಡಿದ್ದಾರೆ. 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಗತಿ ಪರಿಶೀಲನಾ ಸಭೆಗೆ ಶುಕ್ರವಾರ ಮೈಸೂರಿಗೆ ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ʼʼಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ದ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರು ಸಿಗುತಿತ್ತು. ನಮಗೆ ಬಿಜೆಪಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ. ಯಡಿಯೂರಪ್ಪ ಅವರನ್ನ ಕಡೆಗಣಿಸಿದ್ದಾರೆ. ಈಗ ಮಾತನಾಡಿದರೆ ಮಗನಿಗೆ ಸ್ಥಾನ ಸಿಗಬಹುದು ಎಂಬ ಕಾರಣಕ್ಕೆ ಮಾತನಾಡುತ್ತಿದ್ದಾರೆʼʼ ಎಂದು ದೂರಿದರು. 

ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ವ್ಯಂಗ್ಯವಾಡಿದ ಸಚಿವ ಪ್ರಿಯಾಂಕ್, ʼʼಜೆಡಿಎಸ್ ನ ಕುಟುಂಬದವರು ಹೋಗಿ ಮಾಡಿಕೊಂಡು ಬಂದ ಮೈತ್ರಿ ಇದು. ರಾಜ್ಯದ ಬಿಜೆಪಿ ನಾಯಕರು ಸಹ ಹೋಗಿಲ್ಲ. ಮಾಜಿ ಸಚಿವರು, ಮಾಜಿ ಸಿಎಂ ಎಲ್ಲರನ್ನೂ ಕತ್ತಲಲ್ಲಿಟ್ಟು ಮೈತ್ರಿ ಮಾಡಲಾಗಿದೆ. ಇದನ್ನು ಖುದ್ದು ಬಿಜೆಪಿಯ ರೇಣುಕಾಚಾರ್ಯ ಹೇಳಿದ್ದಾರೆ. ಬಿಜೆಪಿಯವರು ತಮ್ಮದನ್ನ ತಾವು ನೋಡಿಕೊಳ್ಳಲಿ. ಕಾಂಗ್ರೆಸ್ ನ ಚಿಂತೆ ಅವರಿಗೆ ಬೇಡ. ನಮ್ಮ ಆದ್ಯತೆ ಐದು ಗ್ಯಾರೆಂಟಿಗಳನ್ನ ಅನುಷ್ಠಾನ ಮಾಡುವುದಾಗಿದೆʼʼ ಎಂದು ಸ್ಪಷ್ಟಪಡಿಸಿದರು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News