ವಿಧಾನ ಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಿಜೆಪಿ ಸದಸ್ಯೆ ತೇಜಸ್ವಿನಿಗೌಡ

Update: 2024-03-27 12:43 GMT

ಬೆಂಗಳೂರು: ವಿಧಾನ ಪರಿಷತ್‍ನ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ಅವರು ದಿಢೀರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಬುಧವಾರ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸದಲ್ಲಿ ರಾಜೀನಾಮೆ ಸಲ್ಲಿಕೆ ಮಾಡಿದ್ದು, ರಾಜೀನಾಮೆಯನ್ನು ಸಭಾಪತಿಗಳು ಅಂಗೀಕರಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಸಭಾಪತಿ ಬಸವರಾಜ ಹೊರಟ್ಟಿ, ‘ಸದಸ್ಯೆ ತೇಜಸ್ವಿನಿ ಗೌಡ ರಾಜೀನಾಮೆ ನೀಡಿದ್ದಾರೆ. ಆದರೆ, ತೇಜಸ್ವಿನಿ ಗೌಡ ಅವರ ಅವಧಿ 2024ರ ಜೂನ್ ವರೆಗೂ ಇತ್ತು. ಅವರ ಮನವೊಲಿಕೆಗೆ ಬಹಳಷ್ಟು ಪ್ರಯತ್ನಿಸಿದೆ. ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿರುವುದಾಗಿ ಅವರು ಹೇಳಿದ್ದಾರೆ. ಅವರು ಖುದ್ದಾಗಿ ಹಾಜರಾಗಿ ರಾಜೀನಾಮೆ ನೀಡಿದ್ದಾರೆʼ ಎಂದರು.

‘ಅಲ್ಲದೆ, ಇತ್ತೀಚಿಗಷ್ಟೇ, ವಿಧಾನ ಪರಿಷತ್ ಸದಸ್ಯತ್ವಕ್ಕೆ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ರಾಜೀನಾಮೆ ಸಲ್ಲಿಸಿದ್ದರು. ಆನಂತರ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಇನ್ನೂ, ತೇಜಸ್ವಿನಿ ಗೌಡ ಅವರೂ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News