ನನ್ನನ್ನು ಗುಂಡಿಕ್ಕಿ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ: ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧವೇ ಬಿಜೆಪಿ ಶಾಸಕ ಪ್ರಭು ಚೌಹಾಣ್ ಗಂಭೀರ ಆರೋಪ

Update: 2023-08-10 17:29 IST
ನನ್ನನ್ನು ಗುಂಡಿಕ್ಕಿ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ: ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧವೇ ಬಿಜೆಪಿ ಶಾಸಕ ಪ್ರಭು ಚೌಹಾಣ್ ಗಂಭೀರ ಆರೋಪ

ಭಗವಂತ ಖೂಬಾ |ಪ್ರಭು ಚವ್ಹಾಣ್

  • whatsapp icon

ಬೀದರ್: ಕೇಂದ್ರ ಸಚಿವ ಭಗವಂತ ಖೂಬಾ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದರು. ಆದರೆ ಅವರ ಪ್ರಯತ್ನ ವಿಫಲವಾಗಿದ್ದರಿಂದ ಈಗ ತಾನು ಸಾಕಿದ ಗೂಂಡಾಗಳಿಂದ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪ್ರಭು ಚವ್ಹಾಣ್ ಗಂಭೀರ ಆರೋಪ ಮಾಡಿದ್ದಾರೆ.‌

ಔರಾದ್ ಪಟ್ಟಣದ ಸಾಯಿ ಕಲ್ಯಾಣ ಮಂಟಪದಲ್ಲಿ ಬುಧವಾರ ತಾಲೂಕು ಬಿಜೆಪಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕಾರಣಿ ಸಭೆಯಲ್ಲಿ ಚವ್ಹಾಣ್ ಮಾತನಾಡಿರುವ  ವಿಡಿಯೋ ವೈರಲ್ ಆಗಿದ್ದು ''ನನ್ನನ್ನು ಕೊಂದು 6 ತಿಂಗಳಲ್ಲಿ ಉಪಚುನಾವಣೆಗೂ ಷಡ್ಯಂತ್ರ ನಡೆಸುತ್ತಿದ್ದಾರೆ. ರಸ್ತೆ ಮಧ್ಯೆ ನನ್ನನ್ನು ಗುಂಡಿಕ್ಕಿ ಕೊಲೆ ಮಾಡಲು ಸಂಚು ರೂಪಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಖೂಬಾ ಬೆಂಬಲಿಗರಿಂದಲೇ ನನಗೆ ಗೊತ್ತಾಗಿದೆ'' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

''ಪದೆಪದೇ ನಾನು ಮುಂಬೈ ಮೂಲದವನು ಎನ್ನುವುದನ್ನು ಸಚಿವ ಖೂಬಾ ಮೊದಲು ನಿಲ್ಲಿಸಲಿ. ನಾನೂ ಔರಾದ್ ತಾಲೂಕಿವನಾಗಿದ್ದು ಹೊಟ್ಟೆ ಪಾಡಿಗಾಗಿ ಮುಂಬೈಗೆ ಹೊಗಿದ್ದೆನೆ. ನನ್ನಂತೆ ತಾಲೂಕಿನ ಸಾವಿರಾರು ಜನರು ಕೆಲಸಕ್ಕಾಗಿ ಹೈದರಾಬಾದ್, ಮುಂಬೈ,ಬೆಂಗಳೂರಿನಲೂ ಇದ್ದಾರೆ ಅಂದರೆ ತಾಲೂಕಿನ ನಾಗರಿಕರೇ ಅಲ್ವವೇ'' ಎಂದು ಪ್ರಶ್ನೆ ಮಾಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News