ಸಚಿವ ಝಮೀರ್‌ ಅಹ್ಮದ್‌ ಅವರನ್ನು ಭೇಟಿಯಾದ ಬಿಜೆಪಿ ಶಾಸಕ ಯತ್ನಾಳ್‌

Update: 2024-12-17 11:43 GMT

ಬೆಳಗಾವಿ : ವಕ್ಫ್ ಭೂಮಿ, ರೈತರಿಗೆ ನೋಟಿಸ್​ ವಿಚಾರ ಸೇರಿದಂತೆ  ನಿತ್ಯ ಝಮೀರ್‌ ಅಹ್ಮದ್‌ ವಿರುದ್ಧ ಟೀಕೆ ಮಾಡುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​, ಇಂದು(ಡಿ.17) ಸಚಿವ ಝಮೀರ್ ಅಹ್ಮದ್‌ ಖಾನ್ ಅವರನ್ನು ಭೇಟಿ ಮಾಡಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಅವರು ಸುವರ್ಣಸೌಧ ಕಚೇರಿಯಲ್ಲಿ ಸಚಿವ ಝಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿ ಯೋಜನೆ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸಚಿವರ ಭೇಟಿ ಕುರಿತು ಟ್ವೀಟ್‌ ಮಾಡಿರುವ ಅವರು, "ಸಚಿವರನ್ನು ಭೇಟಿಯಾದದ್ದು ಕೇವಲ ಕ್ಷೇತ್ರದ ಅಭಿವೃದ್ಧಿಯ ವಿಚಾರಗಳಿಗೆ ಸಂಬಂಧಿಸಿದಂತೆ ಹೊರತು ಯಾವುದೇ ಚರ್ಚೆಗಲ್ಲ. ವಿಜಯಪುರ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಜನರ ಆಶೋತ್ತರವನ್ನು ಈಡೇರಿಸಲು ನಾನು ಬದ್ಧನಾಗಿದ್ದೇನೆ" ಎಂದು ಸ್ಪಷ್ಟಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News