ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಬಂಧನ ಬೆನ್ನಲ್ಲೇ ಶಾಸಕ ಮುನಿರತ್ನಗೆ ಬಿಜೆಪಿ ಶೋಕಾಸ್ ನೋಟಿಸ್
Update: 2024-09-14 14:20 GMT
ಬೆಂಗಳೂರು: ಕೋಲಾರ: ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋಲಾರದಲ್ಲಿ ಬಂಧಿಸಲಾಗಿದ್ದು, ಇದರ ಬೆನ್ನಲ್ಲೇ ಅವರಿಗೆ ಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ಬಿಜೆಪಿ ಶಾಸಕ ಮುನಿರತ್ನ ಹಾಗೂ ಗುತ್ತಿಗೆದಾರ ಚಲುವರಾಜು ಅವರದ್ದು ಎನ್ನಲಾದ ಆಡಿಯೋ ವೈರಲ್ ಆದ ಬಳಿಕ ಶಾಸಕರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
"ಮಾಧ್ಯಮದಲ್ಲಿ ನೀವು ಅವಹೇಳನಕಾರಿಯಾಗಿ ಮಾತನಾಡಿರುವಂತೆ ಪ್ರಸರಣಗೊತ್ತಿದೆ. ಇದಕ್ಕೆ ಕುರಿತಂತೆ ತಮ್ಮ ಮೇಲೆ ಎಫ್ಐಆರ್ ಕೂಡ ದಾಖಲಾಗಿದೆ. ಈ ತರಹದ ಘಟನೆ ಪಕ್ಷದ ಶಿಸ್ತಿಗೆ ಧಕ್ಕೆಯನ್ನುಂಟು ಮಾಡಿದೆ. ಹಾಗಾಗಿ ಈ ವಿಷಯಕ್ಕೆ ಸಂಬಂಧಿಸಿದಂತೆ ಐದು ದಿನಗಳ ಒಳಗಾಗಿ ಬಿಜೆಪಿ ಶಿಸ್ತು ಸಮಿತಿಯ ಮುಂದೆ ಸ್ಪಷ್ಠೀಕರಣ ನೀಡಬೇಕೆಂದು" ನೋಟಿಸ್ ನೀಡಲಾಗಿದೆ.