ಕಾಂಗ್ರೆಸ್‌ ನ ಗ್ಯಾರಂಟಿಗಳನ್ನು ಟೀಕಿಸುವ ಬಿಜೆಪಿಗರೇ ಈ ಎಲ್ಲ ಯೋಜನೆಗಳ ಮೊದಲ ಫಲಾನುಭವಿಗಳು: ಪ್ರಿಯಾಂಕ್‌ ಖರ್ಗೆ

Update: 2023-12-19 06:40 GMT

ಕಲಬುರಗಿ: ಗೃಹ ಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಟೀಕಿಸುವ ಬಿಜೆಪಿಗರೇ ಈ ಎಲ್ಲ ಯೋಜನೆಗಳ ಮೊದಲ ಫಲಾನುಭವಿಗಳಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

2018-19 ನೇ ಸಾಲಿನ ಡಿಎಮ್ಎಫ್ ಯೋಜನೆಯಡಿಯಲ್ಲಿ ಕೊಲ್ಲೂರು ಗ್ರಾಮದಿಂದ ಬನ್ನಟ್ಟಿಯವರೆಗೆ ರೂ 570 ಲಕ್ಷ ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯದ ಆರು ಕೋಟಿ ಜನರಲ್ಲಿ 4.80 ಕೋಟಿ ಜನರು ಈ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಇವರಲ್ಲಿ ಕೇವಲ ಕಾಂಗ್ರೆಸ್‌ ನವರು ಮಾತ್ರವೇ ಇದ್ದಾರೆಯೇ? ಬಿಜೆಪಿಗರು ಇಲ್ಲವೇ? ಆರ್ಥಿಕ ಸ್ಥಿರತೆಗಾಗಿ ಪ್ರತಿ ತಿಂಗಳು ರೂ 2000 ಧನ ಸಹಾಯ ಮಾಡುವ ಗೃಹಲಕ್ಷ್ಮಿ ಯೋಜನೆ ಜಾರಿಗೆ ತರಲಾಗಿದೆ. ಇದರಿಂದಾಗಿ ಗೃಹಿಣಿಯರು ಮನೆಯ ಸಂಸಾರಕ್ಕಾಗಿ ಅದೇ ಹಣ ಬಳಕೆ ಮಾಡುತ್ತಿದ್ದಾರೆ. ಇದು ಜನಪರ ಆಡಳಿತಧ್ಯೋತಕವಾಗಿದೆ. ಶಕ್ತಿ ಯೋಜನೆಯ ಲಾಭ ಪಡೆಯುತ್ತಿರುವ ಮಹಿಳೆಯರು ದೇವಸ್ಥಾನಕ್ಕೆ ಭೇಟಿ‌ ನೀಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲವೇ? ಇದಕ್ಕೆ ಯಾಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಪ್ರಶ್ನಿಸಿದರು.

ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಆಯ್ಕೆ ಹಾಗೂ ಅಕ್ಕಿ ಕಳ್ಳನ ಪರವಾಗಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಪ್ರಚಾರ ಸೇರಿದಂತೆ ಹಲವಾರು ವಿಷಯಗಳಿಗಾಗಿ ಕಳೆದ ವಿಧಾನಸಭೆ ಚುನಾವಣೆ ರಾಷ್ಟ್ರದ ಗಮನ ಸೆಳೆದಿತ್ತು. ಮತ್ತೊಂದು ಕಡೆ ನನ್ನ ವೈಯಕ್ತಿಕ‌ ಕಾರಣಗಳಿಂದಾಗಿ ಜಾಸ್ತಿ ಪ್ರಚಾರಕ್ಕೆ ಬಂದಿರಲಿಲ್ಲ. ಆದರೂ ನೀವೆಲ್ಲ ಸೇರಿಕೊಂಡು ಪ್ರಚಾರ ಮಾಡಿ ನನ್ನನ್ನು ಗೆಲ್ಲಿಸಿದ್ದೀರಿ. ನಿಮ್ಮ ಋಣ ಯಾವ ರೀತಿ ತೀರಿಸಬೇಕೆಂದು ನನಗೆ ತಿಳಿಯುತ್ತಿಲ್ಲ ಎಂದು ಅವರು ಭಾವುಕರಾಗಿ ನುಡಿದರು.

ರಾಜ್ಯ ಸರ್ಕಾದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವನಾಗಿ ಮುಂದಿನ 5 ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದು ಕ್ಷೇತ್ರದ ಸಮಗ್ರ ಅಭಿವೃದ್ದಿ ಮಾಡುತ್ತೇನೆ. ರಾಜ್ಯ ಸರ್ಕಾರ ಐದು ತಿಂಗಳಲ್ಲಿಯೇ ನಾಲ್ಕು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿದರು.





Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News