ಮಂಡ್ಯ ಜಿಲ್ಲೆಗೆ ಬಿಜೆಪಿ ಕಾಲಿಟ್ಟ ಬಳಿಕ ‘ಕೋಮು ಗಲಭೆ’ : ಬಿ.ಕೆ.ಹರಿಪ್ರಸಾದ್

Update: 2024-09-12 13:59 GMT

ಬೆಂಗಳೂರು: ‘ಪ್ರತಿಪಕ್ಷ ಬಿಜೆಪಿ ಮಂಡ್ಯ ಜಿಲ್ಲೆಗೆ ಕಾಲಿಟ್ಟ ಬಳಿಕ ಕೋಮು ಗಲಭೆಯನ್ನು ಸೃಷ್ಟಿಸಲು ಪ್ರಯತ್ನ ನಡೆಸಿದ್ದು, ಅವರಿಗೆ ರೋಟಿ, ಕಪಡಾ, ಔರ್ ಮಕಾನ್(ಅನ್ನ, ಬಟ್ಟೆ, ಸೂರು) ಇದೆ. ಹೀಗಾಗಿ ಕೋಮು ಗಲಭೆಗಳ ಸೃಷ್ಟಿಗೆ ಮುಂದಾಗಿದ್ದಾರೆ ಎಂದು ಹಿರಿಯ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನತೆ ಎಂದೂ ಕೋಮು ಗಲಭೆಗಳಿಗೆ ಅವಕಾಶ ಕೊಟ್ಟಿಲ್ಲ. ಆದರೆ, ಇದೀಗ ಬಿಜೆಪಿ ಮಂಡ್ಯ ಜಿಲ್ಲೆಗೆ ಕಾಲಿಟ್ಟ ಬಳಿಕ ಕೋಮು ಗಲಭೆ ಸೃಷ್ಟಿ ಮಾಡಲು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ನಾಗಮಂಗಲ ಗಲಭೆ ಪ್ರಕರಣದಲ್ಲಿ ಆರೋಪಿಗಳು ಎಷ್ಟೇ ದೊಡ್ಡವರು ಆಗಿದ್ದರು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಕಾನೂನು ಚೌಕಟ್ಟು ಮೀರಿ ಹೋದವರಿಗೆ ಸರಿಯಾದ ಬುದ್ದಿ ಕಲಿಸಬೇಕು. ಕಾಂಗ್ರೆಸ್‍ನಿಂದ ಅಲ್ಪಸಂಖ್ಯಾತರ ತುಷ್ಠೀಕರಣ ಎಂಬ ಆರೋಪ ಮಾಡುತ್ತಿದ್ದಾರೆ. ಹಾಗಾದರೆ ಕೇಂದ್ರ ಸರಕಾರಕ್ಕೂ ತುಷ್ಟಿಕರಣಕ್ಕೂ ಸಂಬಂಧವೇ ಇಲ್ಲವೇ? ಕಾಲಕ್ಕೆ ತಕ್ಕಂತೆ ಬಣ್ಣ ಬದಲಾಯಿಸಿಕೊಂಡು ಮಾತಾಡುವುದು ಸರಿಯಲ್ಲ. ಘಟನೆಯ ಹಿಂದೆ ಸರಕಾರದ ವೈಫಲ್ಯ ಇಲ್ಲ ಎಂದು ಅವರು ಹೇಳಿದರು.

ಇತ್ತೀಚೆಗೆ ಕೆಲ ಸಂಘಟನೆಗಳು ಕೋಮುಗಲಭೆ ಮಾಡಲು ಹುಟ್ಟಿಕೊಂಡಿವೆ. ಅಲ್ಲದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಿ ಸರಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿದ್ದಾರೆ. ಕೋಮು ಗಲಭೆಯನ್ನು ಸಣ್ಣದು ಎಂದು ಪರಿಗಣಿಸಬಾರದು. ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News