ಮುಡಾ ಪ್ರಕರಣ | ಹೈಕೋರ್ಟ್ ತೀರ್ಪು ಅನಿರೀಕ್ಷಿತ ಮಾತ್ರವಲ್ಲ, ದುರದೃಷ್ಟಕರ : ಬಿ.ಕೆ.ಹರಿಪ್ರಸಾದ್‌

Update: 2024-09-24 13:04 GMT

ಬಿ.ಕೆ.ಹರಿಪ್ರಸಾದ್‌

ಬೆಂಗಳೂರು : "ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹೈಕೋರ್ಟ್ ತೀರ್ಪು, ಅನಿರೀಕ್ಷಿತ ಮಾತ್ರವಲ್ಲ ದುರದೃಷ್ಟಕರ" ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್‌ ಅಭಿಪ್ರಾಯಪಟ್ಟಿದ್ದಾರೆ.

ಮಂಗಳವಾರ ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, "ಜನರಿಂದ ಆಯ್ಕೆಯಾದ ಸರಕಾರ ಅಸ್ಥಿರಗೊಳಿಸಿ, ಮುಖ್ಯಮಂತ್ರಿಯ ವಿರುದ್ಧದ ಬಿಜೆಪಿಯ ಷಡ್ಯಂತ್ರದ ಭಾಗವಾಗಿಯೇ ಪ್ರಕ್ರಿಯೆ ನಡೆಯುತ್ತಿರುವುದು ಸ್ಪಷ್ಟ. ಸೇಡಿನ ರಾಜಕಾರಣಕ್ಕೆ ನ್ಯಾಯಾಂಗದ ಮೂಲಕವೇ ಉತ್ತರ ಸಿಗಲಿದೆ" ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದೆ. ಆ ಮೂಲಕ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು.

‘ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಬರುವುದಿಲ್ಲ. ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನಿಸಲು ಅವಕಾಶವಿದೆ. ಕೋರ್ಟ್ ಬಗ್ಗೆ ನಮಗೆ ಗೌರವವಿದೆ. ಆದರೆ, ಸಿಎಂ ವಿರುದ್ಧದ ಆರೋಪದಲ್ಲಿ ಹುರುಳಿಲ್ಲ. ಸಿದ್ದರಾಮಯ್ಯನವರೇ ಸಿಎಂ ಆಗಿ ಇರಬೇಕು. ಪ್ರತಿಪಕ್ಷಗಳು ಅಧಿಕಾರದಲ್ಲಿರುವ ರಾಜ್ಯ ಸರಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ ನಡೆಸಿದೆ. ಆದರೆ ಈ ತೀರ್ಪಿನಿಂದ ಸಿದ್ದರಾಮಯ್ಯಗೆ ಹಿನ್ನಡೆ ಆಗುವುದಿಲ್ಲ. ಮುಂದಿನ ಕಾನೂನು ಹೋರಾಟದ ಬಗ್ಗೆ ತಜ್ಞರ ಜೊತೆಗೆ ಚರ್ಚೆ ಮಾಡುತ್ತೇವೆ’

-ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News