ಬಿ.ಕೆ.ಹರಿಪ್ರಸಾದ್ ಸಿಎಂ ಹುದ್ದೆಗೆ ಅರ್ಹ: ಪ್ರಣವಾನಂದ ಸ್ವಾಮೀಜಿ

Update: 2024-06-28 16:34 GMT

ಹಾವೇರಿ: ಈಡಿಗ ಸಮಾಜದ ನಾಯಕ, ವಿಧಾನ ಪರಿಷತ್ತಿನ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಸಿಎಂ ಹುದ್ದೆಗೆ ಅರ್ಹವಾದ ವ್ಯಕ್ತಿ ಎಂದು ಬ್ರಹ್ಮರ್ಷಿ ನಾರಾಯಣಗುರು ಪೀಠದ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್ 49 ವರ್ಷ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದಿದ್ದಾರೆ. ಇಂದಿರಾ ಗಾಂಧಿಯಿಂದ ಹಿಡಿದು ಪ್ರಸ್ತುತ ಪ್ರಿಯಾಂಕಾ ಗಾಂಧಿವರೆಗೆ ಪಕ್ಷಕ್ಕಾಗಿ ಕೆಲಸ ಮಾಡಿದವರು ಎಂದು ಹೇಳಿದರು.

ಅಲ್ಲದೆ, ಕಾಂಗ್ರೆಸ್ ಸರಕಾರದಲ್ಲಿ ಈಡಿಗ ಸಮಾಜಕ್ಕೆ ಒಂದೇ ಒಂದು ಸಚಿವ ಸ್ಥಾನ ನೀಡಿದ್ದಾರೆ. ಆದರೆ, ಬಿಜೆಪಿ ಸರಕಾರವಿದ್ದಾಗ ಇಬ್ಬರಿಗೆ ಸಚಿವ ಸ್ಥಾನ, ಮೂವರಿಗೆ ನಿಗಮ ಮಂಡಳಿ ಸ್ಥಾನ ನೀಡಿದ್ದರು.ಆದರೆ, ಸಿಎಂ ಬದಲಾವಣೆ ಮಾಡುವುದಾದರೆ ಈಡಿಗ ಸಮಾಜದ ನಾಯಕ ಬಿ.ಕೆ.ಹರಿಪ್ರಸಾದ್‍ಗೆ ಸಿಎಂ ಸ್ಥಾನ ನೀಡಬೇಕು. ಕೊನೆ ಪಕ್ಷ ಡಿಸಿಎಂ ಹುದ್ದೆಯನ್ನಾದರೂ ನೀಡಲಿ ಎಂದು ಒತ್ತಾಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News