ಬಿಜೆಪಿಗೆ ಹೀನಾಯ ಸೋಲುಣಿಸಿದ ಬೊಮ್ಮಾಯಿಗೆ ಕಾಂಗ್ರೆಸ್‌ ಬಗ್ಗೆ ಮಾತಾಡುವ ನೈತಿಕ ಹಕ್ಕಿಲ್ಲ: ಎಂ.ಬಿ ಪಾಟೀಲ್

Update: 2024-02-02 09:30 GMT

ಬೆಂಗಳೂರು: ‌ಲೋಕಸಭಾ ಚುನಾವಣೆ ಬಳಿಕ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಹೇಳಲು ಬಸವರಾಜ ಬೊಮ್ಮಾಯಿ ಅವರಿಗೆ ಯಾವ ನೈತಿಕತೆ ಇದೆ ಎಂದು ಭಾರಿ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಪ್ರಶ್ನಿಸಿದ್ದಾರೆ.

ಶುಕ್ರವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಹೀನಾಯ ಸೋಲು ಕಂಡಿದ್ದು, ಕಾಂಗ್ರೆಸ್ ಪಕ್ಷಕ್ಕೆ 135 ಸೀಟುಗಳು ಬಂದಿರುವುದರಲ್ಲಿ ಬೊಮ್ಮಾಯಿ ಅವರ ಕೊಡುಗೆಯೂ ಇದೆ ಎಂದರು.

ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದಾಗ ಬುದ್ಧಿವಂತರೊಬ್ಬರು ಆ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆಂದು ನಾವೂ ಖುಷಿಪಟ್ಟಿದ್ದೆವು. ಆದರೆ, ಅದನ್ನು ಉಳಿಸಿಕೊಳ್ಳಲು ಅವರಿಗೆ ಆಗಲಿಲ್ಲ ಎಂದು  ಟೀಕಿಸಿದರು.

ಪ್ರತ್ಯೇಕ ರಾಷ್ಟ್ರ ದ ಬಗ್ಗೆ ಸಂಸದ ಡಿ.ಕೆ ಸುರೇಶ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ದಕ್ಷಿಣದ ರಾಜ್ಯಗಳಿಗೆ ಆದಾಯಕ್ಕೆ ತಕ್ಕ ಪ್ರತಿಫಲ ಸಿಗಲಿ ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಅವರು ಹಾಗೆ ಹೇಳಿದ್ದಾರೆ. ಅದಕ್ಕೆ ಹೆಚ್ಚಿನ ಅರ್ಥಗಳನ್ನು ಕಲ್ಪಿಸುವ ಅಗತ್ಯವಿಲ್ಲ ಎಂದರು.


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News