ಪರಿಷತ್ತಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ 2025ಕ್ಕೆ ಅಂಗೀಕಾರ

Update: 2025-03-20 21:12 IST
ಪರಿಷತ್ತಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ 2025ಕ್ಕೆ ಅಂಗೀಕಾರ
  • whatsapp icon

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ 2025ಕ್ಕೆ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧೇಯಕವನ್ನು ವಿಧಾನ ಪರಿಷತ್ತಿನಲ್ಲಿ ಮಂಡಿಸಿದರು. ಧ್ವನಿಮತದ ಮೂಲಕ ವಿಧೇಯಕ ಅಂಗೀಕಾರವಾಯಿತು.

ಮೂರು ವಿಧೇಯಕಗಳಿಗೆ ಅಂಗೀಕಾರ :

ಕರ್ನಾಟಕ ಪಶು ಆಹಾರ (ಉತ್ಪಾದನೆ ಮತ್ತು ಗುಣಮಟ್ಟ ನಿಯಂತ್ರಣದ ವಿನಿಮಯ) ವಿಧೇಯಕ, ಡಾ.ಎಚ್.ನರಸಿಂಹಯ್ಯ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಹಾಗೂ ನೋಟರಿಗಳ(ತಿದ್ದುಪಡಿ) ವಿಧೇಯಕಗಳನ್ನು ಗುರುವಾರ ವಿಧಾನಸಭೆಯ ಕಲಾಪದಲ್ಲಿ ಅಂಗೀಕರಿಸಲಾಯಿತು.

ಈ ವಿಧೇಯಕಗಳನ್ನು ಸಂಬಂಧಿಸಿದ ಸಚಿವರ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸದನಕ್ಕೆ ಮಂಡಿಸಿದರು. ನಂತರ ಸ್ಪೀಕರ್ ಯು.ಟಿ.ಖಾದರ್ ಸದನ ಮತ ಪಡೆದು ಅಂಗೀಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News