‘ಮುಡಾ ಪ್ರಕರಣʼದ ಸಿಬಿಐ ತನಿಖೆಗೆ ಬಿ.ಎಸ್.ಯಡಿಯೂರಪ್ಪ ಆಗ್ರಹ

Update: 2024-11-06 13:15 GMT

ಯಡಿಯೂರಪ್ಪ

ಬೆಂಗಳೂರು : ಮೈಸೂರು ಲೋಕಾಯುಕ್ತದಲ್ಲಿ ನಡೆಯುತ್ತಿರುವ ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೆ ಒಳಪಟ್ಟಿದ್ದಾರೆ. ಲೋಕಾಯುಕ್ತ ತನಿಖೆಯಿಂದ ಏನೂ ಆಗಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹಾಗಾಗಿ, ಸಿಎಂ ತಾವು ಸಾಚಾ ಎಂಬುದನ್ನು ಬಿಂಬಿಸಿಕೊಳ್ಳಲು ವಿಚಾರಣೆಗೆ ಹಾಜರಾಗಿ ನಾಟಕ ಮಾಡಿದ್ದಾರೆ ಅಷ್ಟೇ ಎಂದು ಟೀಕಿಸಿದರು.

ಮುಡಾ ಹಗರಣದ ಸತ್ಯಾಸತ್ಯತೆ ಹೊರ ಬರಬೇಕು ಎಂದರೆ ಸಿಬಿಐ ತನಿಖೆ ಆಗಲೇಬೇಕೆಂದು ಎಲ್ಲರೂ ಹೇಳುತ್ತಿದ್ದಾರೆ. ನಾನು ಸಿಬಿಐ ತನಿಖೆಗೆ ಆಗ್ರಹಿಸುತ್ತೇನೆ. ಸಿಎಂ ಸಿದ್ದರಾಮಯ್ಯ ನನ್ನ ರಾಜಕೀಯ ಜೀವನ ತೆರೆದ ಪುಸ್ತಕ ಎಂದೆಲ್ಲ ಹೇಳುತ್ತಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ, ಮುಡಾ ಪ್ರಕರಣದ ಸತ್ಯಸತ್ಯಾತೆ ಹೊರಬರಬೇಕು ಎನ್ನುವ ಆಶಯ ಇದ್ದರೆ ಕೂಡಲೇ ಸಿಬಿಐ ತನಿಖೆಗೆ ಆದೇಶಿಸಲಿ ಎಂದು ಆಗ್ರಹಿಸಿದರು.

‘ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ. ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಮದ್ಯ ಮಾರಾಟಗಾರರೇ ದೂರು ನೀಡಿದ್ದಾರೆ. ಹೀಗಾಗಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು’

-ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News