ಜ.20ರಿಂದ ‘ಬಜೆಟ್ ಪೂರ್ವಭಾವಿ ಚರ್ಚೆ’

Update: 2024-01-09 14:11 GMT

ಬೆಂಗಳೂರು: ಮುಂಬರಲಿರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಫೆಬ್ರವರಿ ಮೊದಲನೆ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ ಸಾಧ್ಯತೆ ಇದೆ. ಹೀಗಾಗಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಬಜೆಟ್ ಸಿದ್ದತೆಗೆ ಜ.20ರಿಂದ ಆಯವ್ಯಯ ಪೂರ್ವಭಾವಿ ಚರ್ಚೆ ಆರಂಭಿಸಲಿದ್ದಾರೆ.

ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಸರಕಾರದ ಅಪರ ಕಾರ್ಯದರ್ಶಿ ಕೆ.ಚಿರಂಜೀವಿ ಅವರು, ಆಯವ್ಯಯ ಪೂರ್ವಭಾವಿ ಸಭೆಯ ಸೂಚನಾ ಪತ್ರವನ್ನು ಹೊರಡಿಸಿದ್ದಾರೆ ಜ.20ರ ಮಧ್ಯಾಹ್ನ 12ಗಂಟೆಯಿಂದ ರಾತ್ರಿ 8:15ರ ವರೆಗೆ ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಯೋಜನೆ, ಗಣಿ ಮತ್ತು ಭೂ ವಿಜ್ಞಾನ, ಶಾಲಾ ಶಿಕ್ಷಣ ಸಾಕ್ಷರತಾ, ಉನ್ನತ ಶಿಕ್ಷಣ, ಆರೋಗ್ಯ ಇಲಾಖೆ ಸೇರಿದಂತೆ 16 ಇಲಾಖೆಗಳ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ.

ಲೋಕಸಭೆ ಚುನಾವಣೆಯ ಮೇಲೆ ದೃಷ್ಟಿ ನೆಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕಾಂಗ್ರೆಸ್ ನೇತೃತ್ವದ ಸರಕಾರದ ಮಹತ್ವಕಾಂಕ್ಷೆಯ ಗ್ಯಾರಂಟಿ ಯೋಜನೆಗಳಿಗೆ ಹಣಕಾಸಿನ ಹೊಂದಾಣಿಕೆಗೆ ಸಂಪನ್ಮೂಲ ಕ್ರೂಢೀಕರಣವೂ ಸೇರಿದಂತೆ ಅಭಿವೃದ್ಧಿ ದೃಷ್ಟಿಯಿಂದ ಜನಪರ ಮತ್ತು ಜನಪ್ರಿಯ ಬಜೆಟ್ ಮಂಡನೆ ಮಾಡುವ ಸಾಧ್ಯತೆಗಳಿವೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News