ಮೇ 11ರಂದು ರಾಜ್ಯದ 260 ಗ್ರಾ.ಪಂ.ಸ್ಥಾನಗಳಿಗೆ ಉಪಚುನಾವಣೆ ಘೋಷಣೆ
Update: 2025-04-04 19:01 IST
ಸಾಂದರ್ಭಿಕ ಚಿತ್ರ | PC: PTI
ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 222 ಗ್ರಾಮ ಪಂಚಾಯಿತಿಗಳ ಒಟ್ಟು 260 ಸ್ಥಾನಗಳಿಗೆ ಮೇ 11ರಂದು ಉಪ ಚುನಾವಣೆ ನಡೆಸುವುದಾಗಿ ರಾಜ್ಯ ಚುನಾವಣಾ ಆಯೋಗವು ಘೋಷಿಸಿದೆ.
ಎ.22ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ಎ.28ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಎ.29ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 2ರಂದು ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾಗಿದೆ.
ಮೇ 11ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯವಿದ್ದರೆ ಮೇ 13ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ಮೇ 14ರಂದು ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಕಾರ್ಯ ನಡೆಸಿ, ಫಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.