ಬಿಜೆಪಿ ಕಾರ್ಯಕರ್ತನದ್ದು ಆತ್ಮಹತ್ಯೆ ಅಲ್ಲ, ಕೊಲೆ : ಬಿ.ವೈ.ವಿಜಯೇಂದ್ರ ಆರೋಪ

Update: 2025-04-06 20:47 IST
ಬಿಜೆಪಿ ಕಾರ್ಯಕರ್ತನದ್ದು ಆತ್ಮಹತ್ಯೆ ಅಲ್ಲ, ಕೊಲೆ : ಬಿ.ವೈ.ವಿಜಯೇಂದ್ರ ಆರೋಪ

ವಿಜಯೇಂದ್ರ

  • whatsapp icon

ಬೆಂಗಳೂರು : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರದ್ದು ಆತ್ಮಹತ್ಯೆ ಅಲ್ಲ, ಅದೊಂದು ಕೊಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳಾದ ಇಬ್ಬರು ಶಾಸಕರ ವಿರುದ್ಧ ಎಫ್‍ಐಆರ್ ದಾಖಲಾಗಿಲ್ಲ. ಅಧಿಕಾರದ ದರ್ಪದಿಂದ ಕಾಂಗ್ರೆಸ್‍ನವರು ಹೇಳಿಕೆ ಕೊಡುತ್ತಿದ್ದಾರೆ ಎಂದು ದೂರಿದರು.

ಈ ಪ್ರಕರಣದ ಹಿಂದೆ ಯಾವೆಲ್ಲ ದುಷ್ಟಶಕ್ತಿಗಳಿವೆ ಎಂದು ಎಲ್ಲರಿಗೂ ಗೊತ್ತಿದೆ. ಅವರಿಗೆ ಶಿಕ್ಷೆ ಆಗಲೇಬೇಕು. ನಾವು ಕಾನೂನು ಹೋರಾಟ ಮಾಡುತ್ತೇವೆ. ಕಾನೂನು ತಜ್ಞರ ಜತೆ ಮುಂದಿನ ಹೋರಾಟ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News