ಅತಿಥಿ ಉಪನ್ಯಾಸಕರಿಗೆ 4 ತಿಂಗಳಿನಿಂದ ವೇತನ ಇಲ್ಲ: ಬಿ.ವೈ.ವಿಜಯೇಂದ್ರ

Update: 2024-10-05 18:51 IST
ಅತಿಥಿ ಉಪನ್ಯಾಸಕರಿಗೆ 4 ತಿಂಗಳಿನಿಂದ ವೇತನ ಇಲ್ಲ: ಬಿ.ವೈ.ವಿಜಯೇಂದ್ರ

ಬಿ.ವೈ.ವಿಜಯೇಂದ್ರ

  • whatsapp icon

ಬೆಂಗಳೂರು: ಜನಸಾಮಾನ್ಯರಿಂದ ಹಿಡಿದು ಅಧಿಕಾರಿ ವರ್ಗದವರೆಗೂ ಕಾಂಗ್ರೆಸ್ ಸರಕಾರಕ್ಕೆ ಹಿಡಿಶಾಪ ಹಾಕುತ್ತಿರುವುದು ನಿಲ್ಲುವಂತೆ ಕಾಣುತ್ತಿಲ್ಲ. ಯಾವೊಂದು ಹೊಸ ಯೋಜನೆಗಳೂ ಜಾರಿಯಾಗಲಿಲ್ಲ, ಹೊಸ ಕಾಮಗಾರಿಗಳಿಗೆ ಚಾಲನೆಯೂ ಸಿಗಲಿಲ್ಲ, ಯಾವ ಇಲಾಖೆಯ ಅಧಿಕಾರಿಗಳಿಗೂ ಸಮಯಕ್ಕೆ ಸರಿಯಾಗಿ ವೇತನ ಸಿಗುತ್ತಿಲ್ಲ, ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ ತಪ್ಪುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಇದೀಗ ಶಿಕ್ಷಕರಿಗೂ ಸಂಕಟ ತಂದೊಡ್ಡಿರುವ ಕಾಂಗ್ರೆಸ್ ಸರಕಾರ ಸೇವಾ ಭದ್ರತೆಗಾಗಿ ನಿರಂತರ ಹೋರಾಟ ನಡೆಸುತ್ತಲೇ ತ್ರಿಶಂಕು ಸ್ಥಿತಿಯಲ್ಲಿ ದಿನ ದೂಡುತ್ತಿರುವ ಅತಿಥಿ ಉಪನ್ಯಾಸಕರರಿಗೆ ಕಳೆದ 4 ತಿಂಗಳಿಂದಲೂ ವೇತನ ನೀಡದೇ ಶಿಕ್ಷಕರು ಜೀವನ ನಡೆಸವುದೂ ಕಷ್ಟವಾಗಿದೆ ಎಂದು ಟೀಕಿಸಿದ್ದಾರೆ.

ಸರಕಾರದ ಈ ತಾತ್ಸಾರ ಧೋರಣೆಯಿಂದಾಗಿ 42 ಸಾವಿರಕ್ಕೂ ಹೆಚ್ಚು ಶಿಕ್ಷಕರಿಗಷ್ಟೇ ಅಲ್ಲ, ಲಕ್ಷಾಂತರ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಕೊಡಲಿ ಪೆಟ್ಟು ಬೀಳಲಿದೆ. ತಕ್ಷಣ ಈ ದಪ್ಪ ಚರ್ಮದ ಸರಕಾರ ಉಪನ್ಯಾಸಕರಿಗೆ ವೇತನ ಬಿಡುಗಡೆ ಮಾಡದಿದ್ದರೆ ಬಿಜೆಪಿ ಉಪನ್ಯಾಸಕರ ಪರ ಬೀದಿಗಿಳಿಯಬೇಕಾದೀತು. ಎಚ್ಚರ ಎಂದು ವಿಜಯೇಂದ್ರ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News