ಫೆ.15ಕ್ಕೆ ಮಲೆಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ

Update: 2025-01-10 15:53 GMT

ಬೆಂಗಳೂರು : ರಾಜ್ಯ ಸರಕಾರ ಈಗಾಗಲೇ ನಿರ್ಧರಿಸಿದಂತೆ ಬರುವ ಫೆ.15ರಂದು ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯದ ಸಚಿವ ಸಂಪುಟ ಸಭೆ ಜರುಗಲಿದೆ. ಇದರಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ ಎಂದು ಸರಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್.ಚಂದ್ರಶೇಖರ್ ತಿಳಿಸಿದ್ದಾರೆ.

ಕೆಲ ಮಾಧ್ಯಮಗಳಲ್ಲಿ ಸಂಪುಟ ಸಭೆಯು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟಕ್ಕೆ ಸ್ಥಳಾಂತರಿಸಲಾಗಿದೆ ಎಂಬ ಸುದ್ದಿ ಪ್ರಕಟವಾಗಿದೆ. ಆದರೆ ಯಾವುದೇ ಬದಲಾವಣೆಗಳಾಗಿಲ್ಲ. ಪೂರ್ವನಿರ್ಧಾರದಂತೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿಯೇ ಸಂಪುಟ ಸಭೆ ಜರುಗಲಿದೆ ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News