2022ರ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
Update: 2023-12-08 07:11 GMT
ಬೆಳಗಾವಿ: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಲಾಗಿದ್ದ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಈ ಮೊದಲು ಕೃಷಿ ಭೂಮಿ ಹೊಂದಿದವರು ಮಾತ್ರ ಕೃಷಿ ಭೂಮಿ ಖರೀದಿಗೆ ಅವಕಾಶ ಇತ್ತು. ಆದರೆ 2022 ರಲ್ಲಿ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕದ ಮೂಲಕ ಯಾರು ಬೇಕಾದರು ಭೂಮಿ ಖರೀದಿಗೆ ಅವಕಾಶ ಮಾಡಿ ಕೊಡಲಾಗಿತ್ತು. ಪ್ರಸ್ತುತ ಕೆಲವೊಂದು ಹೊಸ ತಿದ್ದುಪಡಿಯೊಂದಿಗೆ ನೂತನ ವಿಧೇಯಕ ಈ ಬಾರಿಯ ಅಧಿವೇಶನದಲ್ಲೇ ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.