ಚುನಾವಣೆಯ ಕಾರಣಕ್ಕೆ ನೇಮಕಾತಿ ಪ್ರಕ್ರಿಯೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ : ಹೈಕೋರ್ಟ್

Update: 2024-03-27 08:41 GMT

ಬೆಂಗಳೂರು: ಚುನಾವಣೆಯ ಕಾರಣಕ್ಕೆ ನೇಮಕಾತಿ ಪ್ರಕ್ರಿಯೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಆದ್ದರಿಂದ ಆರಂಭವಾಗಿದ್ದ ನೇಮಕಾತಿ ಪ್ರಕ್ರಿಯೆನ್ನು ಪೂರ್ಣಗೊಳಿಸಿಬೇಕು ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಖಡಕ್ ಸೂಚನೆ ರವಾನಿಸಿದೆ.

ಲೋಕಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆ, ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಮೇಲ್ಮನವಿ ನ್ಯಾಯಾಧಿಕರಣಕ್ಕೆ ನಡೆಯುತ್ತಿದ್ದ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿ ಪ್ರಕ್ರಿಯೆಗಳನ್ನು ಸರಕಾರ ಸ್ಥಗಿತಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕೆಲ ಪತ್ರಕರ್ತರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು, ರೇರಾ ಮೇಲ್ಮನವಿ ನ್ಯಾಯಮಂಡಳಿಗೆ ಅದರ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಬೇಕು ಮತ್ತು ಕ್ರಿಯಾತ್ಮಕಗೊಳಿಸಬೇಕು ಎಂದು ಹೇಳಿತ್ತು. ಸರಕಾರಕ್ಕೆ ಮೂರು ವಾರಗಳ ಕಾಲಾವಕಾಶ ನೀಡಿತ್ತು. ಆ ಆದೇಶದ ಪಾಲನೆಗೆ ಸಂಬಂಧ ಹೈಕೋರ್ಟ್‌ ವಿಚಾರಣೆ ನಡೆಸಿದೆ.

ಸರಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು, ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಆದೇಶಗಳನ್ನು ಜಾರಿಗೊಳಿಸಲು ಚುನಾವಣೆ ಘೋಷಣೆ ಅಡ್ಡಿಯಾಗಿದೆ ಎಂದು ಹೇಳಿದರು. ವಾದ ಆಲಿಸಿದ ನ್ಯಾಯಪೀಠ ಚುನಾವಣೆ ಕಾರಣ ನೇಮಕಾತಿಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ನೇಮಕಾತಿಯನ್ನು ಪೂರ್ಣಗೊಳಿಸಬೇಕು ಎಂದು ಸರಕಾರಕ್ಕೆ ಸೂಚಿನೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News