ಗೂಳಿಹಟ್ಟಿ ಶೇಖರ್ ಗೆ ಆರೆಸ್ಸೆಸ್ ಕಚೇರಿಗೆ ಪ್ರವೇಶ ನಿರಾಕರಣೆ: ಪ್ರಕರಣದಿಂದ ಅಂತರ ಕಾಯ್ದುಕೊಂಡ ಬಿಜೆಪಿ ನಾಯಕರು

Update: 2023-12-06 06:20 GMT

ಬೆಂಗಳೂರು: ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಮಹಾರಾಷ್ಟ್ರದಲ್ಲಿನ ನಾಗ್ಪುರದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಹೆಡಗೇವಾರ್‌ ವಸ್ತುಸಂಗ್ರಹಾಲಯಕ್ಕೆ ಪ್ರವೇಶ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಬಿಜೆಪಿ ನಾಯಕರು ಅಂತರ ಕಾಯ್ದುಕೊಳ್ಳುತ್ತಿದ್ದಾರೆ. 

ಸುದ್ದಿಗಾರರು ಈ ಬಗ್ಗೆ ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಲು ಬಿಜೆಪಿ ನಾಯಕರು ಹಿಂದೇಟು ಕಾಕುತ್ತಿದ್ದಾರೆ.

ಪ್ರಸಕ್ತ ಪ್ರಕರಣ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ʼನನಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅದರ ಬಗ್ಗೆ ತಿಳಿದುಕೊಂಡು ಮಾತಾಡುತ್ತೇನೆ. ನಿಮ್ಮಷ್ಟು ಬುದ್ದಿವಂತ ನಾನಲ್ಲʼ ಎಂದು ಸುದ್ದಿಗಾರರ  ಪ್ರಶ್ನೆಗೆ ಕೋಪಗೊಂಡಿದ್ದಾರೆ.

 ಪ್ರತಿಪಕ್ಷ ನಾಯಕ ಆರ್ ಅಶೋಕ್ ಸುದ್ದಿಗಾರರು ಪ್ರಶ್ನೆ ಕೇಳುತ್ತಿದ್ದಂತೆ ಯಾವುದೇ ಪ್ರತಿಕ್ರಿಯೆ ನೀಡದೆ ಸ್ಥಳದಿಂದ ತೆರಳಿದ್ದಾರೆ ಎನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News