ಕಾವೇರಿ ನದಿಗೆ ಕಲುಷಿತ ನೀರು : ಅಧ್ಯಯನಕ್ಕೆ ಸಮಿತಿ ರಚಿಸಿ ಸರಕಾರ ಆದೇಶ

Update: 2024-07-04 13:27 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಜೀವನದಿ ಕಾವೇರಿ ನದಿ ನೀರು ಮಲೀನಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಧ್ಯಯನಕ್ಕೆ ತುರ್ತು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಸಂಬಂಧಪಟ್ಟ ಇಲಾಖೆಗಳ ತಜ್ಞರನ್ನೊಳಗೊಂಡ ಸಮಿತಿ ರಚಿಸಿ ರಾಜ್ಯ ಸರಕಾರ ಗುರುವಾರ ಆದೇಶಿಸಿದೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನಿರಂಜನ್ ಅಧ್ಯಕ್ಷತೆಯಲ್ಲಿ 9 ಮಂದಿ ಹಿರಿಯ ಅಧಿಕಾರಿಗಳನ್ನೊಂಡ ತಜ್ಞರ ಸಮಿತಿಯನ್ನು ರಚನೆ ಮಾಡಲಾಗಿದೆ. ಕಾವೇರಿ ನದಿಗೆ ಘನತ್ಯಾಜ್ಯ, ಕೈಗಾರಿಕ ತ್ಯಾಜ್ಯ ಸೇರ್ಪಡೆಯಿಂದ ನೀರು ಕಲುಷಿತವಾಗಿ ನೈಸರ್ಗಿಕ ಗುಣ ಕಳೆದುಕೊಂಡು ಮಾಲಿನ್ಯ ಉಂಟಾಗುತ್ತಿದೆ. ಅಲ್ಲದೆ, ನಾಗರಿಕರು ಮತ್ತು ಜಲಚರಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ.

ಈ ಸಂಬಂಧ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರ ಬರೆದು ಸರಕಾರದ ಗಮನ ಸೆಳೆದ ಬೆನ್ನಲ್ಲೇ ಪೂರಕ ಕ್ರಮ ಕೈಗೊಂಡಿರುವ ರಾಜ್ಯ ಸರಕಾರ, ತುರ್ತು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಸಂಬಂಧಪಟ್ಟ ಇಲಾಖೆಗಳ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸಿ ಆದೇಶಿಸಿದೆ.

ಕಾವೇರಿ ನದಿಗೆ ಒಳಚರಂಡಿ ನೀರು, ಘನ ತ್ಯಾಜ್ಯ, ಕೈಗಾರಿಕೆ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲೀನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗಿ ಪರಿಸರಕ್ಕೆ ಆಗಿರುವ ಅನಾಹುತದ ತಡೆಯ ಬಗ್ಗೆ ಪರಿಶೀಲಿಸಿ 10 ದಿನಗಳ ಒಳಗಾಗಿ ವರದಿ ಸಲ್ಲಿಸಲು ರಚಿಸಲಾದ ತಜ್ಞರ ಸಮಿತಿಗೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News