ಕಾವೇರಿ ನದಿ ನೀರು ವಿವಾದ: ಚಾಮರಾಜನಗರದಲ್ಲಿ ಬಿಎಸ್ಎನ್ಎಲ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ

Update: 2023-09-22 06:55 GMT

ಚಾಮರಾಜನಗರ: ಕಾವೇರಿ ನದಿ ನೀರು ವಿವಾದ ಹಿನ್ನಲೆಯಲ್ಲಿ ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಕಾವೇರಿ ಕಿಚ್ಚು ಹೆಚ್ಚಾಗುತಿದ್ದು, ಬಿಎಸ್ಎನ್ಎಲ್ ಕಚೇರಿಗೆ ಮುತ್ತಿಗೆ ಹಾಕುವ ಚಳವಳಿ ಶುಕ್ರವಾರ ನಡೆಯಿತು.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ನಿತ್ಯವೂ ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಗಳು ವಿನೂತನ ಚಳವಳಿ ನಡೆಸುತ್ತಿದ್ದು, ಶುಕ್ರವಾರ ಕೇಂದ್ರ ಸರ್ಕಾರ ಸೌಮ್ಯದಲ್ಲಿರುವ ಬಿ.ಎಸ್.ಎನ್.ಎಲ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಚಾಮರಾಜನಗರದ ವಿವಿಧ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಕನ್ನಡ ಧ್ವಜವನ್ನು ಹಿಡಿದು ಸುಪ್ರಿಂ ಕೋರ್ಟ್ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆ ಹಾಗೂ ಆದೇಶವನ್ನು ಖಂಡಿಸಿ ಪಾದಯಾತ್ರೆ ಮೂಲಕ ಚಾಮಲ್ ಬೀದಿಯಲ್ಲಿರುವ ಬಿ.ಎಸ್.ಎನ್ ಎಲ್ ಕಚೇರಿಗೆ ಆಗಮಿಸಿ ಧರಣಿ ನಡೆಸಿದ ಬಳಿಕ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು.

ಸ್ಥಳದಲ್ಲೇ ಇದ್ದ ಪಟ್ಟಣ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಕೆಲ ಸಮಯದ ಬಳಿಕ ಬಿಡುಗಡೆಗೊಳಿಸಿದರು.

ಕರ್ನಾಟಕ ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ. ಶ್ರೀನಿವಾಸಗೌಡ, ಹಿರಿಯ ಹೋರಾಟಗಾರ ಶಾ.ಮುರಳಿ, ನಿಜಧ್ವನಿ ಗೋವಿಂದರಾಜು, ಚಾ.ರಾ.ಕುಮಾರ್ ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News