ಕಾವೇರಿ ನೀರು ವಿಚಾರ: ಬೆಂಗಳೂರು ಬಂದ್; ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿದ ಪೊಲೀಸರು

Update: 2023-09-26 03:02 GMT

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬಾರದು’ ಎಂದು ಆಗ್ರಹಿಸಿ ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಮಂಗಳವಾರ ಬೆಂಗಳೂರು ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಳ್ಳಂ ಬೆಳಗ್ಗೆಯೇ ಪೊಲೀಸರು ಕಾರ್ಯನಿರತರಾಗಿದ್ದಾರೆ.

ಕೆಆರ್ ಪುರಂ, ಹೂಡಿ ಸರ್ಕಲ್, ಕುಂದಲಹಳ್ಳಿ ಸುತ್ತಮುತ್ತಲಿನ ರಸ್ತೆಗಳಲ್ಲಿ ಬಲವಂತದ ಬಂದ್ ಮಾಡುವವರಿಗೆ ಪೊಲೀಸರು ಎಚ್ಚರಿಕೆ ನೀಡಿದರು.

ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಮತ್ತು ಮೆಟ್ರೊ ರೈಲು ಸಂಚಾರ ಎಂದಿನಂತೆ ಮುಂದುವರಿದಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್.ಡಿ. ಕುಮಾರಸ್ವಾಮಿ ಅವರು, ಕಾವೇರಿ ನೀರಿಗಾಗಿ ನಡೆಯುತ್ತಿರುವ ಬೆಂಗಳೂರು ಬಂದ್ ಗೆ ನನ್ನ ಪೂರ್ಣ ಬೆಂಬಲವಿದೆ. ಹೋರಾಟ ಶಾಂತಿಯುತವಾಗಿರಲಿ, ಬಂದ್ ಯಶಸ್ವಿ ಆಗಲಿ. ಜೆಡಿಎಸ್ ಪಕ್ಷದ ಕಾರ್ಯಕರ್ತರು ಕೂಡ ಬಂದ್ ನಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News