ಜಾತಿ ಗಣತಿ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸಿ: ಮಾಜಿ ಸಚಿವ ಸುನಿಲ್ ಕುಮಾರ್

Update: 2023-11-23 12:28 GMT

ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಿಜಕ್ಕೂ ಬದ್ಧತೆ ಇದ್ದರೆ ವರದಿ ಅಧ್ಯಯನದ ಬಗ್ಗೆ ಸಂಪುಟ ಉಪಸಮಿತಿ ರಚಿಸುವ ನಾಟಕ  ಬಿಟ್ಟು ಹಿಂದಿನ ತಪ್ಪುಗಳ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲಿ ಎಂದು ಮಾಜಿ ಸಚಿವ ವಿ.ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜಾತಿ ಗಣತಿ ವರದಿಯಲ್ಲಿನ ಗೊಂದಲಗಳನ್ನು ಗಮನಿಸಿದರೆ ಇದೊಂದು ದೊಡ್ಡ ಹಗರಣ ಎಂಬುದರಲ್ಲಿ ಅನುಮಾನವೇ ಇಲ್ಲ. 162 ಕೋಟಿ ರೂ.ವೆಚ್ಚದಲ್ಲಿ ತಯಾರಿಸಿದ ವರದಿಯ ಉದ್ದೇಶವೆ ಈಡೇರುತ್ತಿಲ್ಲ ಎಂದರೆ ಅರ್ಥವೇನು ? ಎಂದು ಪ್ರಶ್ನಿಸಿದರು.

ವರದಿ ಬಗ್ಗೆ ಇಷ್ಟೊಂದು ಚರ್ಚೆಗಳು   ನಡೆಯುತ್ತಿದ್ದರೂ ಆಯೋಗದ ಹಿಂದಿನ ಅಧ್ಯಕ್ಷ ಕಾಂತರಾಜ್ ನಾಪತ್ತೆಯಾಗಿದ್ದಾರೆ. ಆಯೋಗದ  ವರದಿಗೆ ಕಾರ್ಯದರ್ಶಿ ಅವರು ಅಂದು ಸಹಿ ಹಾಕಿಲ್ಲ ಎಂದರೆ ತಾವು ಈ ವರದಿಯ ಭಾಗವಾಗಲು ತಯಾರಿಲ್ಲ ಎಂದರ್ಥವಲ್ಲವೇ ? ಅಂದರೆ ವರದಿ ತಯಾರಿ ಹಂತದಲ್ಲೆ ಭಾರಿ ಲೋಪ ಹಾಗೂ ಅವ್ಯವಹಾರ ನಡೆದಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News