ಕುರುಬ ಸಮುದಾಯವನ್ನು ‘ಎಸ್‍ಟಿ’ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

Update: 2023-10-03 14:59 GMT

ಬೆಳಗಾವಿ, ಅ.3: ಗುಲ್ಬರ್ಗ, ಬೀದರ್, ಯಾದಗಿರಿಯಲ್ಲಿ ಗೊಂಡ, ರಾಜಗೊಂಡ ಕುರುಬ ಸಮುದಾಯದವರು ಎಸ್‍ಟಿಗೆ ಸೇರಿದ್ದರೆ, ಕೊಡಗು ಜಿಲ್ಲೆಯಲ್ಲಿ ಎಲ್ಲ ಕುರುಬರು ಎಸ್‍ಟಿಗೆ ಸೇರಿದ್ದಾರೆ. ಕುರುಬರು ಮತ್ತು ಗೊಂಡ ಸಮುದಾಯಗಳನ್ನು ಎಸ್‍ಟಿಗೆ ಸೇರಿಸಬೇಕು ಎಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಈಗ ಈ ವಿಚಾರವು ಕೇಂದ್ರ ಸರಕಾರದ ಅಂಗಳದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಗಳವಾರ ಬೆಳಗಾವಿಯ ನೆಹರೂ ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ನಡೆದ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್‍ನ 9ನೆ ರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅನೇಕ ರಾಜ್ಯಗಳಲ್ಲಿ ಕುರುಬ ಸಮುದಾಯದವರು ಎಸ್.ಸಿ, ಎಸ್.ಟಿ., ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದಲ್ಲಿಯೂ ಇದ್ದಾರೆ. ಗೊಲ್ಲರು, ಕುರುಬರು, ಕೋಳಿ ಸಮಾಜವು ಸೇರಿದಂತೆ ವಿವಿಧ ಸಮಾಜಗಳನ್ನು ಎಸ್.ಟಿ ಸಮುದಾಯಕ್ಕೆ ಸೇರಿಸುವಂತೆ ಕೇಂದ್ರಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು.

ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರೆತಿಲ್ಲ. ಇನ್ನೂ ಕೂಡ ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಗಿಲ್ಲ. ದೇಶದಲ್ಲಿ ಹಾಗೂ ಕರ್ನಾಟಕದಲ್ಲಿ ಈಗಲೂ ಇಂಥ ಸ್ಥಿತಿ ಇದೆ. ಪ್ರತಿಯೊಂದು ಸಮುದಾಯವು ಮುಖ್ಯವಾಹಿನಿಗೆ ಬರದೆ ಸಮಸಮಾಜದ ನಿರ್ಮಾಣ ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News