ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: 284 ಕೋಟಿ ರೂ.ಗಳ ಶಾಲೆ-ಕಾಲೇಜು ಕಟ್ಟಡ ನಿರ್ಮಾಣ ಯೋಜನೆಗೆ ಕೇಂದ್ರ ಒಪ್ಪಿಗೆ

Update: 2024-03-12 15:44 GMT

ಸಚಿವ ಝಮೀರ್ ಅಹ್ಮದ್ ಖಾನ್

ಬೆಂಗಳೂರು: ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಶಾಲೆ ಹಾಗೂ ಕಾಲೇಜುಗಳ ಕಟ್ಟಡ, ಕೊಠಡಿ ಸೇರಿದಂತೆ ಇತರೆ ಮೂಲ ಸೌಕರ್ಯ ಕಲ್ಪಿಸಲು ಕೇಂದ್ರ ಸರಕಾರ 284 ಕೋಟಿ ರೂ. ಯೋಜನೆಗೆ ಅನುಮೋದನೆ ನೀಡಿದೆ.

ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಇತ್ತೀಚೆಗೆ ದಿಲ್ಲಿಗೆ ತೆರಳಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ ಸಲ್ಲಿಸಿದ್ದ ಪ್ರಸ್ತಾವನೆ ಸಂಬಂಧ 284 ಕೋಟಿ ರೂ. ಯೋಜನೆಗೆ ಕೇಂದ್ರ ಸರಕಾರ ಇಪ್ಪಿಗೆ ನಿಡಿದೆ.

ಈ ಯೋಜನೆಯಡಿಯಲ್ಲಿ ಕೇಂದ್ರ ಸರಕಾರ ಶೇ.60 ರಷ್ಟು ಹಾಗೂ ರಾಜ್ಯ ಸರಕಾರ ಶೇ.40 ರಷ್ಟು ಮೊತ್ತ ಭರಿಸಲಿದೆ. ಕೇಂದ್ರ ಸರಕಾರದ ಈ ಮೊತ್ತದಲ್ಲಿ ರಾಜ್ಯದಲ್ಲಿ 27 ಯೋಜನೆಗಳು ಅನುಷ್ಠಾನಗೊಳ್ಳಲಿದ್ದು, ಶಾಲೆ-ಕಾಲೇಜು ಕಟ್ಟಡ, ಕೊಠಡಿ, ಗ್ರಂಥಾಲಯ ಸೇರಿ ಮೂಲ ಸೌಕರ್ಯ ಕಲ್ಪಿಸಲು ನೇರವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News