ರಾಜ್ಯದ 2 ಮೆಟ್ರೋ ಕಾರಿಡಾರ್‌ಗಳಿಗೆ ಕೇಂದ್ರ ಅನುಮೋದನೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Update: 2024-08-16 17:18 GMT
ಹೊಸದಿಲ್ಲಿ: ನಮ್ಮ ಬೆಂಗಳೂರು ಮೆಟ್ರೋ ರೈಲು ಯೋಜನೆಯ 3ನೇ ಹಂತದ 2 ಕಾರಿಡಾರ್‌ಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಬೆಂಗಳೂರಿನ ಜೆ.ಪಿ.ನಗರ 4ನೇ ಹಂತದಿಂದ ಕೆಂಪಾಪುರದವರೆಗೆ 21 ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸುವ ಕಾರಿಡಾರ್-1ಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅನುಮೋದಿಸಿದೆ. ಇದರ ಜತೆಗೆ ಹೊಸಹಳ್ಳಿಯಿಂದ ಕಡಬಗೆರೆವರೆಗಿನ 9 ನಿಲ್ದಾಣಗಳೊಂದಿಗೆ ಕಾರಿಡಾರ್-2ಕೂ ಕೇಂದ್ರದಿಂದ ಅನುಮೋದನೆ ನೀಡಲಾಗಿದೆ ಎಂದು ಜೋಶಿ ತಿಳಿಸಿದ್ದಾರೆ.
ಈ ಮೆಟ್ರೋ ರೈಲು ಯೋಜನೆ ಕಾರಿಡಾರ್ ಅನುಮೋದಿಸುವ ಮೂಲಕ ಕೇಂದ್ರ ಸರ್ಕಾರ ಕರ್ನಾಟಕದ ರಾಜಧಾನಿಗೆ ಕೊಡುಗೆ ನೀಡಿದೆ. ಕೇಂದ್ರ ಸರ್ಕಾರದ ಈ ಕಾರ್ಯತತ್ಪರತೆ ರಾಜ್ಯ ರಾಜಧಾನಿಯಲ್ಲಿ ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡುತ್ತದೆ ಎಂದು ಜೋಶಿ ತಿಳಿಸಿದ್ದಾರೆ.