ಮಹದಾಯಿ ಯೋಜನೆ ಜಾರಿಗೆ ಕೇಂದ್ರ ಸರಕಾರ ಸಹಕಾರ ನೀಡುತ್ತಿಲ್ಲ: ಡಿ.ಕೆ. ಶಿವಕುಮಾರ್

Update: 2024-02-15 15:59 GMT

ಹುಬ್ಬಳ್ಳಿ: ಮಹದಾಯಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಉತ್ಸುಕವಾಗಿದೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಹುಬ್ಬಳ್ಳಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮಹದಾಯಿ ಯೋಜನೆ ಕಾಮಗಾರಿಗೆ ಪರವಾನಿಗೆ ಸಿಕ್ಕಿದೆ ಎಂದು ಬಿಜೆಪಿಯವರು ಸಿಹಿ‌ಹಂಚಿ ವಿಜಯೋತ್ಸವ ಆಚರಿಸಿದರು. ಆದರೆ ಈಗ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಇದಕ್ಕೆ ಸಂಬಂಧಿಸಿದ ಅರ್ಜಿ ತಿರಸ್ಕರಿಸಿದ್ದಾರೆ ಎಂದರು.

ನಾಳೆ ಮಂಡಿಸಲಾಗುವ ಬಜೆಟ್ ಹೊಸ ದಿಕ್ಸೂಚಿ ಆಗಲಿದೆ ಮತ್ತು ಆಶಾದಾಯಕವಾಗಿರಲಿದೆ. ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ. ಧಾರವಾಡ ಲೋಕಸಭಾ ಕ್ಷೇತ್ರ ಸೇರಿದಂತೆ ಬಹುತೇಕ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಕುರಿತು ಸಮೀಕ್ಷೆ ನಡೆದಿದೆ. ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News