ವಂಚನೆ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಬಿಡುಗಡೆ

Update: 2023-09-18 08:41 GMT

ಬೆಂಗಳೂರು, ಸೆ.18: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ವಂಚಿಸಿರುವ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಕುಸಿದು ಬಿದ್ದ ಹಿನ್ನೆಲೆಯಲ್ಲಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಆರೋಪಿ ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಶುಕ್ರವಾರ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತಂದ ಕೆಲವೇ ಕ್ಷಣಗಳಲ್ಲಿ ಚೈತ್ರಾ ಕುಸಿದುಬಿದ್ದಿದ್ದಳು. ಬಾಯಲ್ಲಿ ನೊರೆ ಕಂಡು ಬಂದ ಹಿನ್ನೆಲೆಯಲ್ಲಿ ಕೂಡಲೇ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದರು. ಸದ್ಯ ಆಕೆಯನ್ನು ಅಧಿಕಾರಿಗಳು ಸಿಸಿಬಿ ಕಚೇರಿಗೆ ಕರೆ ತಂದಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News