ಚೈತ್ರಾ ಕುಂದಾಪುರ ಪ್ರಕರಣ | ತಲೆಮರೆಸಿಕೊಂಡಿರುವ ಆರೋಪಿ ಹಾಲಶ್ರೀ ಸ್ವಾಮೀಜಿ ಜೊತೆಗಿದ್ದ ಸೂಲಿಬೆಲೆ ಫೋಟೊ ವೈರಲ್
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಉದ್ಯಮಿ, ಬಿಜೆಪಿ ಮುಖಂಡರೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಆರೋಪದಡಿ ಬಂಧನಕ್ಕೊಳಗಾಗಿರುವ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಇನ್ನಷ್ಟು ಜನ ಭಾಗಿಯಾಗಿರುವ ಶಂಕೆಯಿದೆ.
ಇತ್ತ ಪ್ರಮುಖ ಆರೋಪಿ (A 3) ಹಾಲಶ್ರೀ ಸ್ವಾಮೀಜಿ ತಲೆಮರೆಸಿಕೊಂಡಿದ್ದು, ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.
ಈ ನಡುವೆ ಹಾಲಶ್ರೀ ಸ್ವಾಮೀಜಿ ಜೊತೆಗಿದ್ದ ಯುವ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ಅವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಪ್ರಕರಣದ ಬಗ್ಗೆ ಹಲವರು ಸಂಶಯ ವ್ಯಕ್ತಪಡಿಸಿದ್ದಾರೆ.
ಚಕ್ರವರ್ತಿ ಸೂಲಿಬೆಲೆ ಮತ್ತು ಹಾಲಶ್ರೀ ಸ್ವಾಮೀಜಿ ರೈಲಿನಲ್ಲಿ ಪ್ರಯಾಣಿಸುವ ಮತ್ತು ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೊಗಳು ಹರಿದಾಡುತ್ತಿವೆ. ಅಲ್ಲದೇ, ಈ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಜೊತೆಗಿದ್ದ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಆರಗ ಜ್ಞಾನೇಂದ್ರ ಅವರ ಫೋಟೊಗಳು ಕೂಡ ಹರಿದಾಡುತ್ತಿದ್ದು, ʼʼಬಿಜೆಪಿ ಪಕ್ಷದ ಟಿಕೆಟ್ ಕೊಡಿಸುತ್ತೇನೆಂದು, ಬಿಜೆಪಿಯವರಿಗೇ ವಂಚಿಸಿದರೂ ವಂಚಕಿಯ ಪರ ನಿಂತಿರುವುದರ ಹಿಂದೆ ಯಾವ ಹಿತಾಸಕ್ತಿ ಅಡಗಿದೆʼʼ ಎಂದು ಬಿಜೆಪಿ ನಾಯಕರನ್ನು ಕಾಂಗ್ರೆಸ್ ಪ್ರಶ್ನಿಸಿದೆ.
ವೈರಲ್ ಆಗುತ್ತಿರುವ ಫೋಟೊ
ದೊಡ್ಡ ದೊಡ್ಡವರ ಹೆಸರು ಕೂಡ ಹೊರ ಬರುತ್ತೆ: ಚೈತ್ರಾ ಕುಂದಾಪುರ
ಗುರುವಾರ ಬೆಳಗ್ಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತರುವ ವೇಳೆ ಚೈತ್ರಾ ಕುಂದಾಪುರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ,ʼʼ ಸ್ವಾಮೀಜಿ ಬಂಧನವಾಗಲಿ, ಸತ್ಯ ಹೊರ ಬರುತ್ತೆ, ಆಗ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆʼʼ ಎಂಬ ಅಂಶವನ್ನು ಬಿಚ್ಚಿಟ್ಟಿದ್ದಾಳೆ. ಇದರ ಬೆನ್ನಲ್ಲೇ ಇದೀಗ ಆರೋಪಿಗಳ ಜೊತೆಗಿರುವ ಬಿಜೆಪಿ ಮತ್ತು ಸಂಘಪರಿವಾರದ ನಾಯಕರ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ವೈರಲ್ ಆಗುತ್ತಿರುವ ಫೋಟೊಗಳು
ಮಾಜಿ ಗೃಹಸಚಿವರು ಆರೋಪಿಯ ಪರ ವಕಾಲತ್ತು ವಹಿಸುತ್ತಿರುವುದರ ಹಿಂದೆ ಯಾವ ಸತ್ಯ ಅಡಗಿದೆ?
— Karnataka Congress (@INCKarnataka) September 13, 2023
ವಂಚನೆ ಆರೋಪಿಯೊಂದಿಗೆ ವೇದಿಕೆಯಲ್ಲಿ ಯಾವ ಘನಂದಾರಿ ಚರ್ಚೆ ಮಾಡಿದ್ದಿರಿ @JnanendraAraga ಅವರೇ?
ಕುಮಾರಕೃಪಾದಲ್ಲಿ ಡೀಲಿಂಗ್ ನಡೆಸಿದ
ಸ್ಯಾಂಟ್ರೋ ರವಿ, ಚೈನ್ ಚೈತ್ರ ಜ್ಞಾನೇಂದ್ರರಿಗೆ ಪರಮಾಪ್ತರು.
ವಂಚಕರಿಗೆ ಕುಮಾರಕೃಪಾ ಸಿಗಲು ಮಾಜಿ ಗೃಹ ಸಚಿವರ… pic.twitter.com/BnyxRkkmz8