ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ

Update: 2024-07-22 17:48 GMT

PC : x/@BYVijayendra

ಬೆಂಗಳೂರು: ರಾಜ್ಯ ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ಬಿಜೆಪಿ ವರಿಷ್ಠರು ನೇಮಿಸಿದ್ದಾರೆ.

ವಿಪಕ್ಷ ನಾಯನಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರಿನಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಆ ಸ್ಥಾನವು ತೆರವಾಗಿತ್ತು. ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಪಕ್ಷದ ಹಿರಿಯ ಮುಖಂಡರಾದ ಸಿ.ಟಿ. ರವಿ ಮತ್ತು ರವಿ ಕುಮಾರ್ ಅವರ ಮಧ್ಯೆ ಪೈಪೋಟಿ ಏರ್ಪಟ್ಟಿತು. ಆದರೆ, ವರಿಷ್ಠರು ಛಲವಾದಿ ನಾರಾಯಸ್ವಾಮಿ ಅವರನ್ನು ಪರಿಷತ್ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಿದೆ.

"ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡಿರುವ ನಮ್ಮ ಪಕ್ಷದ ನಾಯಕ, ನಮ್ಮ ಪರಿಶಿಷ್ಟ ಜಾತಿ ಬಂಧುಗಳ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಛಲವಾದಿ ನಾರಾಯಣಸ್ವಾಮಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು"

ಬಿ.ಎಸ್.ಯಡಿಯೂರಪ್ಪ ಬಿಜೆಪಿ ಹಿರಿಯ ಮುಖಂಡ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News