‘ಆನ್‍ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್’ಗಳ ವಿರುದ್ಧ ಕ್ರಮಕ್ಕೆ ಆಗ್ರಹ : ಗೃಹ ಸಚಿವ ಅಮಿತ್ ಶಾಗೆ ಛಲವಾದಿ ನಾರಾಯಣಸ್ವಾಮಿ ಪತ್ರ

Update: 2024-09-01 15:58 GMT

ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ಸಮಾಜದ ಸ್ವಾಸ್ಥ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಆನ್‌ಲೈನ್ ಗೇಮ್‌ಗಳು ಹಾಗೂ ಬೆಟ್ಟಿಂಗ್ ಆಯಪ್‌ಗಳ ಮಾಲಕರು, ಸಂಸ್ಥಾಪಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್‌ಗೆ ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮನವಿ ಪತ್ರ ಬರೆದಿದ್ದಾರೆ.

ಆನ್‌ಲೈನ್ ಆಟಗಳಿಗೆ ದಾಸವಾಗಿರುವ ಹಲವಾರು ಕುಟುಂಬಗಳು ಮತ್ತು ಯುವಕರನ್ನು ನಾನು ನೋಡಿದ್ದೇನೆ. ಈ ಆನ್‌ಲೈನ್ ಆಟಗಳಿಂದ ಹಲವಾರು ಕುಟುಂಬಗಳು ಬೀದಿ ಪಾಲಾಗಿವೆ. ಕಾರಣ, ದುರಂತ ಅಂತ್ಯವನ್ನು ಕಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಹಲವು ಕುಟುಂಬಗಳು ಸಾಲದ ಸುಳಿಗೆ ಸಿಲುಕಿವೆ. ಆದರೆ, ಈ ಆನ್‌ಲೈನ್ ಗೇಮ್‌ಗಳು ಹಾಗೂ ಬೆಟ್ಟಿಂಗ್ ಆಯಪ್‌ಗಳ ಮಾಲಕರು ಐಶಾರಾಮಿ ಜೀವನ ನಡೆಸುತ್ತಿದ್ದಾರೆ. ಆದ, ಇವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡುತ್ತಿದ್ದೇನೆ. ಜೊತೆಗೆ, ಶೀಘ್ರವೇ ಅವರನ್ನು ಭೇಟಿ ಮಾಡಿ ಈ ವಿಚಾರದ ಸೇರಿದಂತೆ ರಾಜ್ಯದ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ ನಾರಾಯಣಸ್ವಾಮಿ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News