ಚಾಮರಾಜನಗರ ಲೋಕಸಭಾ ಕ್ಷೇತ್ರ: ಬಿಗ್​ ಬಾಸ್​ ಸ್ಪರ್ಧಿ, ಕಿರುತೆರೆ ನಟ ಬಿಜೆಪಿ ಟಿಕೆಟ್ ಆಕಾಂಕ್ಷಿ

Update: 2023-08-23 05:48 GMT

ಚಾಮರಾಜನಗರ:  ಕನ್ನಡದ ಕಿರುತೆರೆ ಧಾರಾವಾಹಿ “ಅಗ್ನಿಸಾಕ್ಷಿ”, “ಇಂತಿ ನಿಮ್ಮ ಆಶಾ” ಮತ್ತು “ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್-1” ಸ್ಪರ್ಧಿ, ನಟ ಅರ್ಜುನ್ ರಮೇಶ್ 2024 ರ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಎಸ್ಸಿ ಮೀಸಲು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವಂತೆ ಬಿಜೆಪಿ ಹೈಕಮಾಂಡಗ ಗೆ ಅವರು ಮನವಿ ಮಾಡಿದ್ದಾರೆ.

ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು', ''ನಾನು ಕಳೆದ 12 ವರ್ಷಗಳಿಂದ ಬಿಜೆಪಿ ಸಂಘಟನೆಯಲ್ಲಿ ತೊಡಗಿದ್ದೇನೆ. ಟಿ.ನರಸೀಪುರ ಪುರಸಭಾ ಸದಸ್ಯನಾಗಿ ಅತ್ಯಧಿಕ ಮತಗಳಿಂದ ಆಯ್ಕೆಯಾಗಿದ್ದೇನೆ. ನನ್ನ ತಂದೆ ಮಾಜಿ ವಿಧಾನಪರಿಷತ್ತ ಸದಸ್ಯ ಸಿ.ರಮೇಶ್. ಕಳೆದ 20 ವರ್ಷಗಳಿಂದ ಪಕ್ಷದ ಸಂಘಟನೆಗೆ ದುಡಿಯುತ್ತಿದ್ದಾರೆ. ಪಕ್ಷ ನನಗೆ ಈ ಬಾರಿ ಅವಕಾಶ ಮಾಡಿಕೊಡಬೇಕೆಂದು ವರಿಷ್ಠರಲ್ಲಿ ಮನವಿ ಮಾಡಿದ್ದೇನೆ. ನನಗೆ ಟಿಕೆಟ್ ಕೊಡಲಿ ಬಿಡಲಿ ಬಿಜೆಪಿಯಲ್ಲೇ ಇರುತ್ತೇನೆ'' ಎಂದು ಹೇಳಿದರು.

''ಈಗಾಗಲೇ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿ ಮಾಡಿ ನನಗೊಂದು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದೇನೆ. ತಿ.ನರಸೀಪುರ ಕ್ಷೇತ್ರದಲ್ಲಿ ಜನಸಂಪರ್ಕ ಕಚೇರಿ ತೆರೆದು ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಾ ಬಂದಿದ್ದೇನೆ. ಸೇವೆ ಮಾಡಬೇಕು ಎಂಬ ಹಂಬಲದಿಂದ ರಾಜಕೀಯಕ್ಕೆ ಬಂದಿದ್ದೇನೆ'' ಎಂದರು.

 

- ನಟ ಅರ್ಜುನ್ ರಮೇಶ್

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News