ಮಳೆ ಸಾಧ್ಯತೆ | ರಾಜ್ಯದ 14 ಜಿಲ್ಲೆಗಳಿಗೆ ಅರೇಂಜ್, ಯೆಲ್ಲೋ ಅಲರ್ಟ್ ಘೋಷಣೆ

Update: 2024-05-19 13:16 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ಮುಂದಿನ ಐದು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 40-50 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ರಾಜ್ಯದ 14 ಜಿಲ್ಲೆಗಳಿಗೆ ಅರೇಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ ಉಡುಪಿ ಜಿಲ್ಲೆಗಳಿಗೆ ಅರೇಂಜ್ ಅಲರ್ಟ್ ಘೋಷಿಸಿದ್ದು, ಉತ್ತರಕನ್ನಡದಲ್ಲಿ ಯೆಲ್ಲೋ ಅಲರ್ಟ್‌ ಅನ್ನು ಮೂರು ದಿನಗಳ ಕಾಲ ನೀಡಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮುಂದಿನ ಐದು ದಿನ ಅರೇಂಜ್ ಅಲರ್ಟ್ ನೀಡಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಹಾಗೂ ಚಾಮರಾಜನಗರದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಾವಣಗೆರೆಯಲ್ಲಿ ಮೇ 22ರಂದು, ಮಂಡ್ಯದಲ್ಲಿ ಮೇ 23ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಮೈಸೂರಿನಲ್ಲಿ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಮನಗರ ಜಿಲ್ಲೆಯಲ್ಲಿ, ತುಮಕೂರಿನಲ್ಲಿ ಮೇ 20ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಗುಡುಗು ಸಹಿತವಾಗಿ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News