ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ
Update: 2024-04-18 15:19 GMT
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಎ.23ರವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ಸುತ್ತಮುತ್ತ ಗರಿಷ್ಟ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತರ ಕನ್ನಡ, ಬೀದರ್ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ.
ಎ.18ರಿಂದ ಎ.21ರವರೆಗೆ ದಕ್ಷಿಣ ಒಳನಾಡು ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯ ವೇಗ ಗಂಟೆಗೆ 20-40ಕಿ.ಮೀ. ತಲುಪುವ ಜೊತೆಗೆ ಮೇಲ್ಮೈ ಮಾರುತಗಳು ಬಲವಾದ ಮತ್ತು ರಭಸದಿಂದ ಕೂಡಿರುವ ಸಾಧ್ಯತೆ ಇದೆ.