ಚೆಕ್‌ಬೌನ್ಸ್‌ ಪ್ರಕರಣ | ಮಾಜಿ ಸಚಿವ ಬಿ.ನಾಗೇಂದ್ರ ಸೇರಿ ಮೂವರು ಆರೋಪಿಗಳಿಗೆ 1.25 ಕೋಟಿ ರೂ. ದಂಡ ವಿಧಿಸಿದ ಕೋರ್ಟ್

Update: 2025-04-09 19:07 IST
PHOTO OF B. Nagendra

ಬಿ.ನಾಗೇಂದ್ರ

  • whatsapp icon

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನ ಆಗಿ ಬಿಡುಗಡೆ ಆಗಿರುವ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ವಿಎಸ್‌ಎಲ್ ಸ್ಟೀಲ್ಸ್ ಲಿಮಿಟೆಡ್‌ನ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಚೆಕ್​​ ಬೌನ್ಸ್​ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳು 1 ಕೋಟಿ 25 ಲಕ್ಷ ರೂ. ದಂಡ ಪಾವತಿಸುವಂತೆ ಕೋರ್ಟ್‌ ಆದೇಶಿಸಿದೆ. ಒಂದು ವೇಳೆ ಈ ದಂಡ ಪಾವತಿ ಮಾಡದಿದ್ದಲ್ಲಿ 1 ವರ್ಷ ಜೈಲುವಾಸಕ್ಕೆ ಗುರಿಪಡಿಸಲಾಗುತ್ತದೆ ಎಂದು  42ನೇ ಎಸಿಜೆಎಂ ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಕರಣ ಹಿನ್ನೆಲೆ :

ದೂರುದಾರ ವಿಎಸ್‌ಎಲ್ ಸ್ಟೀಲ್ಸ್ ಲಿಮಿಟೆಡ್ ಹಾಗೂ ಮಾಜಿ ಸಚಿವ ನಾಗೇಂದ್ರ ಹಾಗೂ ಅನಿಲ್ ರಾಜಶೇಖರ್ ಚುಂಡೂರು ಭಾಸ್ಕರ್ ಪಾಲುದಾರಿಕೆಯ ಬಿ.ಸಿ. ಇನ್ಫ್ರಾಸ್ಟ್ರಕ್ಚರ್ ಅಂಡ್ ರಿಸೋರ್ಸ್ ಕಂಪನಿ ನಡುವೆ 2013 ರಿಂದಲೂ ಹಣಕಾಸು ವಿವಾದವಿತ್ತು.

ವಿಎಸ್‌ಎಲ್ ಕಂಪೆನಿ ಪರವಾಗಿ ನ್ಯಾಯಾಲಯ ಆದೇಶ ನೀಡಿದ್ದು, ನಾಗೇಂದ್ರ ಪಾಲುದಾರಿಕೆಯ ಕಂಪೆನಿ ಒಟ್ಟು 2 ಕೋಟಿ 53 ಲಕ್ಷ ಪಾವತಿಸಬೇಕಿತ್ತು. ಇದರ ಭಾಗವಾಗಿ 1 ಕೋಟಿ ರೂಪಾಯಿಯ ಚೆಕ್ ಅನ್ನು ನೀಡಲಾಗಿತ್ತು. ಆದರೆ, 2022 ರಲ್ಲಿ ಚೆಕ್​ಬೌನ್ಸ್ ಆದ ಹಿನ್ನಲೆಯಲ್ಲಿ ವಿಎಸ್‌ಎಲ್ ಸ್ಟೀಲ್ಸ್ ಲಿಮಿಟೆಡ್ ಪ್ರಕರಣ ದಾಖಲಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News