ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ: ಸಚಿವ ಝಮೀರ್ ಅಹ್ಮದ್

Update: 2023-10-31 14:51 GMT

ಸಂಗ್ರಹ ಚಿತ್ರ

ದಾವಣಗೆರೆ : ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಹಗಲು ಕನಸು ಕಾಣುತ್ತಿದ್ದಾರೆ. 56 ಜನ ಎಂಎಲ್‍ಎ ಗಳನ್ನು ಕರೆದುಕೊಂಡು ಹೋಗಿ ಆಪರೇಷನ್ ಮಾಡೋದು ಸಾಧ್ಯನಾ? ರಮೇಶ್ ಜಾರಕಿಹೊಳಿ ಅವರನ್ನೇ ಕೇಳಿ ಆಪರೇಷನ್ ಎಷ್ಟು ಕಷ್ಟ ಅಂತ ಎಂದ ಅವರು, ಸಮ್ಮಿಶ್ರ ಸರ್ಕಾರದಲ್ಲಿ 17 ಜನರನ್ನು ಕರೆದುಕೊಂಡು ಹೋಗಲು ಎಷ್ಟು ಎಷ್ಟು ಸರ್ಕಸ್ ಮಾಡಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದರು.

ಬಿಜೆಪಿ ಹೈಕಮಾಂಡ್ ಬಳಿ ತಮ್ಮ ಬೇಳೆ ಬೇಯಿಸಿಕೊಳ್ಳಲು ರಮೇಶ್ ಜಾರಕಿಹೊಳಿ ಹೀಗೆ ಮಾತನಾಡುತ್ತಿದ್ದಾರೆ. ಮೊದಲು ಬಿಜೆಪಿ ಪಕ್ಷದಲ್ಲಿರುವ ಶಾಸಕರನ್ನು ಮೊದಲು ಉಳಿಸಿಕೊಳ್ಳಲಿ. ಬಿಜೆಪಿ ಶಾಸಕರು ಕಾಂಗ್ರೆಸ್‍ಗೆ ಬರಲು ಒಂದೇ ಕಾಲಿನಲ್ಲಿ ನಿಂತಿದ್ದಾರೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News