ಅಲ್ಪಸಂಖ್ಯಾತ ಸಮುದಾಯದ ಮುಖಂಡರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ
Update: 2024-02-12 16:15 GMT
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರಾದ ಮುಸ್ಲಿಮ್, ಸಿಖ್, ಕ್ರಿಶ್ಚಿಯನ್, ಬೌದ್ಧ ಹಾಗೂ ಜೈನ್ ಸಮುದಾಯಗಳಿಗೆ ಸೇರಿದ 200 ಮಂದಿ ಪ್ರತಿನಿಧಿಗಳು ಮತ್ತು ಮುಖಂಡರೊಂದಿಗೆ ಸೋಮವಾರ 2024-25ನೆ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ ಅಹವಾಲು, ಮನವಿ ಸ್ವೀಕಾರ ಮಾಡಿದರು.
ಸಭೆಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಝಮೀರ್ ಅಹ್ಮದ್ ಖಾನ್, ರಹೀಮ್ ಖಾನ್, ಡಿ.ಸುಧಾಕರ್, ಬಿಡಿಎ ಅಧ್ಯಕ್ಷ ಎನ್.ಎ.ಹಾರಿಸ್, ಪರಿಷತ್ ಸದಸ್ಯರಾದ ನಸೀರ್ ಅಹ್ಮದ್, ಸಲೀಮ್ ಅಹ್ಮದ್, ಅಬ್ದುಲ್ ಜಬ್ಬಾರ್, ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಕೆಪಿಸಿಸಿ ಕಾರ್ಯದರ್ಶಿ ಮೆಟಿಲ್ಡಾ, ಮೌಲಾನ ಮಕ್ಸೂದ್ ಇಮ್ರಾನ್, ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷ ಡಾ.ಮುಹಮ್ಮದ್ ಸಾದ್ ಬೆಳಗಾಮಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.