ಚಿಕ್ಕಬಳ್ಳಾಪುರ ಅಪಘಾತ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Update: 2023-10-26 07:19 GMT

ಚಿಕ್ಕಬಳ್ಳಾಪುರ: ಚಿತ್ರಾವತಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಸಂಬಂಧ  X ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದುʼ ಎಂದು ಪ್ರಕಟಿಸಿದ್ದಾರೆ. 

ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ಮೃತರಲ್ಲಿ ಬಹುತೇಕರು ಆಂಧ್ರಪ್ರದೇಶದವರಾಗಿದ್ದಾರೆ ಎಂದು ಹೇಳಲಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News