ಚಿಕ್ಕಮಗಳೂರು: ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು; ಇಬ್ಬರು ಸ್ಥಳದಲ್ಲೇ ಮೃತ್ಯು, ಮತ್ತೊಬ್ಬರು ಗಂಭೀರ

Update: 2023-09-06 14:36 GMT

ಚಿಕ್ಕಮಗಳೂರು, ಸೆ.6: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸೇರಿ ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೇ ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್‍ನಲ್ಲಿ ಬುಧವಾರ ಸಂಜೆ ನಡೆದಿದೆ.

ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯ ನಿರಂಜನ್(47), ಚೆನ್ನಮ್ಮ(67) ಸ್ಥಳದಲ್ಲೇ ಮೃತಪಟ್ಟವರು ಎಂದು ತಿಳಿದು ಬಂದಿದೆ.  ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ರತ್ನಮ್ಮ ಅವರನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬುಧವಾರ ಸಂಜೆ ನಿರಂಜನ್, ಚೆನ್ನಮ್ಮ ಹಾಗೂ ರತ್ಮಮ್ಮ ಎಂಬವರು ಕಾರಿನಲ್ಲಿ ಚಿಕ್ಕಮಗಳೂರಿನಿಂದ ಕಡೂರಿಗೆ ಹೊರಟಿದ್ದು, ಈವೇಳೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‍ಗೆ ಢಿಕ್ಕಿಯಾಗಿದೆ. ಢಿಕ್ಕಿ ರಭಸಕ್ಕೆ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದ್ದು, ಘಟನೆಯನ್ನು ನಿರಂಜನ್ ಹಾಗೂ ಚೆನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನೆ ಸಂಬಂಧ ಸಖರಾಯಪಟ್ಟನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News