ಚಿಕ್ಕಮಗಳೂರು: ಎತ್ತಿನ‌ಗಾಡಿನ ಸ್ಪರ್ಧೆಯಲ್ಲಿ ನೊಗ ಬಡಿದು ಯುವಕ ಮೃತ್ಯು

Update: 2023-09-09 20:14 GMT

ಚಿಕ್ಕಮಗಳೂರು : ಎತ್ತಿನ‌ಗಾಡಿನ ಸ್ಪರ್ಧೆಯಲ್ಲಿ ನೊಗ ಬಡಿದು ಯುವಕನೋರ್ವ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ಶನಿವಾರ ರಾತ್ರಿ ವರದಿಯಾಗಿದೆ. 

 ಮೃತ ಯುವಕನನ್ನು ಅಜ್ಜಂಪುರದ ಭರತ್ (25) ಎಂದು ಗುರುತಿಸಲಾಗಿದೆ. 

ಅಜ್ಜಂಪುರದಲ್ಲಿ ಜೋಡಿ ಎತ್ತಿನ ಗಾಡಿ ಸ್ಪರ್ಧೆ ನಡೆಯುತ್ತಿತ್ತು. ಸ್ಪರ್ಧೆಯ ಕೊನೆಯಲ್ಲಿ ಎತ್ತುಗಳ ನೊಗ ಹಿಡಿದು ನಿಲ್ಲಿಸಲು ಮುಂದಾದಾಗ ಘಟನೆ ನಡೆದಿದೆ. ತಕ್ಷಣ ಯುವಕನನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ದ ಎಂದು ಹೇಳಲಾಗಿದೆ.  

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News