ಚಿಕ್ಕಮಗಳೂರು | ಮಲೆನಾಡಿನಲ್ಲಿ ಭಾರೀ ಮಳೆ-ಗಾಳಿ: ಕೊಟ್ಟಿಗೆಹಾರದಲ್ಲಿ ಮರಬಿದ್ದು ಸಂಚಾರ ಅಸ್ತವ್ಯಸ್ತ

Update: 2023-07-19 08:26 GMT

ಚಿಕ್ಕಮಗಳೂರು, ಜು.19: ಮಲೆನಾಡಿನಲ್ಲಿ ಇಂದು ಮುಂಜಾನೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಕೆಲವೆಡೆ ಗಾಳಿಮಳೆ ರಸ್ತೆಗೆ ಮರಗಳು ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿರುವುದು ವರದಿಯಾಗಿದೆ.

ಮೂಡಿಗೆರೆ, ಕಳಸ, ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲೂಕಿನಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹೊರನಾಡು-ಕೊಟ್ಟಿಗೆಹಾರ ಮಧ್ಯದ ಬಾಳೂರು ಎಸ್ಟೇಟ್ ಬಳಿ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರವೊಂದು ಉರುಳಿಬಿದ್ದಿದೆ. ಇದರಿಂದ ಸುಮಾರು ಒಂದು ಗಂಟೆಗಳ ಕಾಲ ಹೊರನಾಡು ರಸ್ತೆ ಸಂಪರ್ಕ ಮೊಟಕುಗೊಂಡಿತ್ತು. ಬಳಿಕ ಮಳೆಯ ಮಧ್ಯೆಯೂ ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ವಿಪತ್ತು ನಿರ್ವಹಣ ತಂಡವು ಸ್ಥಳೀಯರ ನೆರವಿನಿಂದ ಮರವನ್ನು ತೆರವುಗೊಳಿಸಿದರು.

ಜಿಲ್ಲೆಯ ಬಯಲು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದೆ.

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News