ಚಿಕ್ಕಮಗಳೂರು ನಗರಸಭೆ ಅದ್ಯಕ್ಷ ಬಿಜೆಪಿ ಪಕ್ಷದಿಂದ ಅಮಾನತು

Update: 2023-10-20 06:55 GMT

 ವರಸಿದ್ದಿ ವೇಣುಗೋಪಾಲ್

ಚಿಕ್ಕಮಗಳೂರು: ನಗರಸಭೆ ಅದ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತು ಮಾಡಿ ಜಿಲ್ಲಾದ್ಯಕ್ಷ ಎಚ್ ಸಿ ಕಲ್ಮುರುಡಪ್ಪ ಆದೇಶ ಹೊರಡಿಸಿದ್ದಾರೆ. 

ʼʼಕಳೆದ ಕೆಲವು ತಿಂಗಳಿನಿಂದ ಪಕ್ಷದ ತೀರ್ಮಾನಗಳನ್ನು ಪದೇ ಪದೇ ಉಲ್ಲಂಘಿಸಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದು, ಪಕ್ಷದ ಘನತೆಗೆ ಕುಂದುಂಟು ಮಾಡಿ ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಅಲ್ಲದೇ ಹಲವು ಬಾರಿ ಖುದ್ದು ಹಾಜರಾಗಿ ಸಮಜಾಯಿಷಿ ನೀಡಲು ತಿಳಿಸಿದರೂ ಇದುವರೆಗೂ ಸಮಜಾಯಿಷಿ ನೀಡಿರುವುದಿಲ್ಲ. ಆದ್ದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ನಿಮ್ಮನ್ನು (ವರಸಿದ್ದಿ ವೇಣುಗೋಪಾಲ್) ಅಮಾನತು ಮಾಡಲಾಗಿದೆʼʼ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ. 

ರಾಜೀನಾಮೆ ವಾಪಸ್ ಪಡೆದಿದ್ದ ವೇಣುಗೋಪಾಲ್

ಕಳೆದ ನಾಲ್ಕು ತಿಂಗಳಿನಿಂದ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದಲ್ಲಿ ಬಿಜೆಪಿ ನಗರಸಭೆ ಸದಸ್ಯರು ಹಾಗೂ ಅಧ್ಯಕ್ಷರ ನಡುವೆ ಜಟಾಪಟಿ ನಡೆಯುತ್ತಿದ್ದು, ಪಕ್ಷದ ನಾಯಕರ ಸೂಚನೆ ಮೇರೆಗೆ ಎಡರನೇ ಬಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ವರಸಿದ್ದಿ ವೇಣುಗೋಪಾಲ್ ಇತ್ತೀಚೆಗೆ ರಾಜೀನಾಮೆ ವಾಪಸ್ ಪಡೆದು ಯಾರ ಕಣ್ಣಿಗೂ ಬೀಳದೆ ಕಣ್ಮರೆಯಾಗಿದ್ದರು.

ಮಾಜಿ ಸಚಿವ ಸಿ.ಟಿ ರವಿ ಅವರ ಆಪ್ತರೂ ಕೂಡ ಆಗಿರುವ ವರಸಿದ್ದಿ ವೇಣುಗೋಪಾಲ್ ಅವರ ಈ ನಡೆ ಬಿಜೆಪಿ ಮುಖಂಡರಿಗೆ ಮುಜುಗರ ಉಂಟು ಮಾಡಿತ್ತು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News