ಸಾಗರ | ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷದಿಂದ ಮಗು ಮೃತ್ಯು; ಆರೋಪ

Update: 2023-07-11 18:42 GMT

ಸಾಗರ, ಜು.11: ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷದಿಂದಾಗಿ ನಾಲ್ಕು ದಿನದ ಮಗು ಮೃತಪಟ್ಟಿದೆ ಎಂಬ ಆರೋಪ ಸಾಗರದ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕೇಳಿ ಬಂದಿವೆ. ಕೆಳದಿ ಗ್ರಾಮದ ಅಡ್ಡೇರಿ ವಾಸಿ ಕೃಷ್ಣಮೂರ್ತಿ ಮತ್ತು ಸವಿತಾ ದಂಪತಿ ಮಗು ಮೃತಪಟ್ಟಿದೆ.

ಜುಲೈ 7ರಂದು ಆಸ್ಪತ್ರೆಗೆ ದಾಖಲಾಗಿದ್ದ ಸವಿತಾ ಜುಲೈ 8ರಂದು ಮಗುವಿಗೆ ಜನ್ಮನೀಡಿದ್ದು, ತಾಯಿ ಮಗು ಆರೋಗ್ಯದಿಂದಿತ್ತೆನ್ನಲಾಗಿದೆ.

ಮಂಗಳವಾರ ಬೆಳಗ್ಗೆ ವೈದ್ಯರು ರೌಂಡ್ಸ್‌ಗೆ ಬಂದು ಮಗುವನ್ನು ಪರೀಕ್ಷಿಸಿದಾಗ ಮಗು ಉಸಿರಾಡುತ್ತಿರಲಿಲ್ಲ. ತಕ್ಷಣವೇ ವೈದ್ಯರು ಮಗು ವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದರಾದರೂ ಅಷ್ಟರಲ್ಲೇ ಮಗು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.

ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷದಿಂದಾಗಿಯೇ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಪೋಷಕರು ಮತ್ತು ಸಂಬಂಧಿಕರು ಆಸ್ಪತ್ರೆ ಮುಂಭಾಗ ಮಗುವಿನ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಬಂದ ವೈದ್ಯಾಧಿಕಾರಿ ಡಾ.ಪರಪ್ಪ ಕರ್ತವ್ಯದಲ್ಲಿದ್ದ ವೈದ್ಯರು, ಸಿಬ್ಬಂದಿಯನ್ನು ತರಾಟೆ ತೆಗೆದುಕೊಂಡರು.

ಪ್ರತಿಭಟನಾನಿರತರೊಂದಿಗೆ ಮಾತನಾಡಿದ ಅವರು, ಮುಂದೆ ಇಂತಹ ಘಟನೆ ನಡೆಯದಂತೆ ನಿಗಾ ವಹಿಸಲಾಗುವುದು. ತಕ್ಷಣ ತನಿಖೆ ನಡೆಸಿ ಮಗುವಿನ ಸಾವಿಗೆ ಕಾರಣ ಹುಡುಕುತ್ತೇವೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಕೈ ಬಿಡಲಾಯಿತು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News