ಮೈಸೂರು ಜಿಲ್ಲೆಯಲ್ಲಿ ಚಿತ್ರನಗರಿ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಘೋಷಣೆ

Update: 2023-07-07 15:07 GMT

ಬೆಂಗಳೂರು, ಜು.7: ‘ಮೈಸೂರು ಜಿಲ್ಲೆಯಲ್ಲೇ ಸಾರ್ವಜನಿಕ-ಖಾಸಗಿ ಜಾಗತಿಕ ಮಟ್ಟದ ಸಹಭಾಗಿತ್ವದಲ್ಲಿ ಚಿತ್ರನಗರಿಯನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಘೋಷಣೆ ಮಾಡಿದ್ದಾರೆ.

ಮೂರು ವರ್ಷಗಳಿಂದ ಕನ್ನಡದ ಗುಣಾತ್ಮಕ ಚಿತ್ರಗಳಿಗೆ ಸಹಾಯಧನ ನೀಡುವ ಯೋಜನೆ ಸ್ಥಗಿತಗೊಂಡಿತ್ತು. ಈ ಬಾರಿ, ಆಯ್ಕೆ ಸಮಿತಿಗಳನ್ನು ರಚಿಸಿ, ಸಹಾಯಧನ ನೀಡಲು ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನಲ್ಲಿರುವ ಡಾ. ರಾಜ್‍ಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯವನ್ನು ನಿರ್ಮಿಸಲಾಗುವುದು.

ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೀಡಲಾಗುವ ಮಾಸಾಶನ ಮೊತ್ತವನ್ನು 10 ಸಾವಿರ ರೂ. ಗಳಿಂದ 12 ಸಾವಿರ ರೂ. ಗಳಿಗೆ ಹೆಚ್ಚಿಸಲಾಗಿದೆ. ಮಾಸಾಶನ ಪಡೆಯುವ ಪತ್ರಕರ್ತರು ಮೃತಪಟ್ಟಾಗ ನೀಡಲಾಗುವ ಕುಟುಂಬ ಮಾಸಾಶನ ಮೊತ್ತವನ್ನು ಮೂರು ಸಾವಿರ ರೂ. ಗಳಿಂದ ಆರು ಸಾವಿರ ರೂ. ಗಳಿಗೆ ಹೆಚ್ಚಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News