ಗ್ರಾ.ಪಂ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ವೇಳೆ ಕಾಂಗ್ರೆಸ್‌-ಜೆಡಿಎಸ್‌ ಬೆಂಬಲಿತ ಸದಸ್ಯರ ನಡುವೆ ಮಾರಾಮಾರಿ

Update: 2023-08-10 06:45 GMT

ಮಂಡ್ಯ: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ವೇಳೆ ಸದಸ್ಯರ ನಡುವೆ ಮಾರಾಮಾರಿ ನಡೆದಿರುವ ಘಟನೆ ತಾಲೂಕಿನ ಹಲ್ಲೆಗೆರೆಯಲ್ಲಿ ಬುಧವಾರ ನಡೆದಿದೆ.

ಕಚೇರಿಯಲ್ಲಿ ಸದಸ್ಯರುಗಳು ಪರಸ್ಪರ ಹೊಡೆದಾಡಿ ಕೊಂಡಿದ್ದು, ಗಲಾಟೆಯಿಂದ ಗದ್ದಲದ ವಾತಾವರಣ ನಿರ್ಮಾಣಗೊಂಡು ಅಧಿಕಾರಿಗಳು ಮೂಕ ವಿಸ್ಮಿತರಾಗಿದ್ದರು.

ಸದಸ್ಯರ ನಡುವೆ ತಳ್ಳಾಟ, ನೂಕಾಟ, ನಡೆದಿದ್ದು ಗಲಾಟೆ ವಿಕೋಪಕ್ಕೆ ತಿರುಗಿ ಹೊಡೆದಾಟಕ್ಕೆ ಇಳಿದಿದ್ದಾರೆ. ಪೊಲೀಸರು ಸ್ಥಳದಲ್ಲಿದ್ದರೂ ಪರಿಸ್ಥಿತಿ ನಿಯಂತ್ರಿಸಲು ಸಾಧ್ಯವಾಗಲಿಲ್ಲ.

ಜಿದ್ದಾಜಿದ್ದಿಯ ಕಣವಾಗಿ ಮಾರ್ಪಟ್ಟಿದ್ದ ಗ್ರಾಪಂ ವರಿಷ್ಠರ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಬೆಂಬಲಿತ ಸದಸ್ಯರ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಗಲಾಟೆ ಅತಿರೇಕಕ್ಕೆ ತಿರುಗಿ ಪರಸ್ಪರ ಬಡಿದಾಡಿಕೊಂಡ ಹಿನ್ನೆಲೆ ಚುನಾವಣಾಧಿಕಾರಿಗಳು ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಯನ್ನು ಮುಂದೂಡಿದರು.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News