ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ 6 ಜಿಲ್ಲೆಗಳ ಶಾಸಕರೊಂದಿಗೆ ಸಿಎಂ, ಡಿಸಿಎಂ ಸಭೆ
ಬೆಂಗಳೂರು, ಆ.17: ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಗದಗ, ಉತ್ತರ ಕನ್ನಡ ಹಾಗೂ ವಿಜಯನಗರ ಜಿಲ್ಲೆಗಳ ಕಾಂಗ್ರೆಸ್ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು.
ಮೈಸೂರು ಪಾಲಿಕೆ ಚುನಾವಣೆ ಬಿಬಿಎಂಪಿ ಚುನಾವಣೆ ವೇಳೆಗೆ ಬರುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಎರಡೂ ಚುನಾವಣೆಗಳು ಮಹತ್ವದ್ದು. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವುದು ಖಚಿತ. ಅದೇ ರೀತಿ ಮೈಸೂರು ಪಾಲಿಕೆಯನ್ನೂ ಗೆಲ್ಲಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.
ಶಾಸಕರು ಮತ್ತು ಜಿಲ್ಲಾ ಮಂತ್ರಿಗಳೊಂದಿಗೆ ಸಮನ್ವಯತೆ ಇರಬೇಕು. ಜೊತೆಗೆ, ಸರಕಾರ ಮತ್ತು ಪಕ್ಷದ ಜತೆ ಸಮನ್ವಯ ಇರಬೇಕು. ಐದು ಗ್ಯಾರಂಟಿ ಯೋಜನೆಗಳನ್ನು ಮಧ್ಯಮ ಮತ್ತು ಬಡ ವರ್ಗದ ಎಲ್ಲ್ಲ ಜಾತಿ ಸಮುದಾಯಗಳ ಮನೆ ಬಾಗಿಲಿಗೆ ತಲುಪಿಸಬೇಕು. ಮೈಸೂರು, ಚಾಮರಾಜನಗರ, ಶಿವಮೊಗ್ಗ, ವಿಜಯನಗರ, ಚಿಕ್ಕಮಗಳೂರು, ಶಿವಮೊಗ್ಗ ಉತ್ತರ ಕನ್ನಡ, ಗದಗ ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸುವ ಸಂಬಂಧ ಸಭೆಯಲ್ಲಿ ಚರ್ಚೆ ನಡೆಯಿತು.
ವಿಜಯನಗರ ನೂತನ ಜಿಲ್ಲೆಯಾಗಿರುವುದರಿಂದ ಅಲ್ಲಿಗೆ ಅಗತ್ಯವಿರುವ ಹಲವು ಯೋಜನೆಗಳು ಮತ್ತು ಅನುದಾನದ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಚಿಕ್ಕಮಗಳೂರು ಜಿಲ್ಲೆಯಲ್ಲಿ 170 ಕೆರೆಗಳಿಗೆ ನೀರು ತುಂಬಿಸುವುದು, ಮೆಡಿಕಲ್ ಕಾಲೇಜು, ಅರಣ್ಯ ಭವನ, ಭದ್ರಾ ಯೋಜನೆ ಚುರುಕಾಗಬೇಕು, ಒತ್ತುವರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಜತೆಗೆ ಕೈಗಾರಿಕಾ ಅಭಿವೃದ್ಧಿಗೆ ಜಿಲ್ಲೆಯಲ್ಲಿ ವಾತಾವರಣ ಒಳ್ಳೆಯದಿದ್ದು ಪೆÇ್ರೀತ್ಸಾಹ ಅಗತ್ಯವಿದೆ ಎನ್ನುವುದೂ ಸೇರಿದಂತೆ ಹಲವು ಪ್ರಮುಖ ಸಂಗತಿಗಳ ಕುರಿತು ಒಂದೂವರೆ ಗಂಟೆ ಕಾಲ ಚರ್ಚೆ ನಡೆಯಿತು.