‘ಮೈಶುಗರ್ ವಿದ್ಯುತ್ ಬಿಲ್ ಮನ್ನಾ’ ಕಡತ ಮಂಡನೆಗೆ ಸಿಎಂ ಸೂಚನೆ
Update: 2024-07-07 15:10 GMT
ಬೆಂಗಳೂರು : ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಬಾಕಿಯನ್ನು ಮನ್ನಾ ಮಾಡುವ ಬಗ್ಗೆ ಪರಿಶೀಲಿಸಿ, ಕಡತ ಮಂಡಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಪರಿಷತ್ ಶಾಸಕ ದಿನೇಶ ಗೂಳಿಗೌಡ, ಮೈಶುಗರ್ ಸಕ್ಕರೆ ಕಾರ್ಖಾನೆಯ ಬಾಕಿ ವಿದ್ಯುತ್ ಬಿಲ್ ಅನ್ನು ಮನ್ನಾ ಮಾಡಲು ಕೋರಿ ಮಾಡಿರುವ ಮನವಿಗೆ ಸಿಎಂ, ಪ್ರಸ್ತಾವನೆಯನ್ನು ಸಂಪುಟದ ಮುಂದೆ ತರಲು ಕ್ರಮ ವಹಿಸುವಂತೆ ಸೂಚಿಸಿದ್ದಾರೆ.
ಮಂಡ್ಯ ಮೈಶುಗರ್ ಕಾರ್ಖಾನೆ 25 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟಿಲ್ಲ. ಹೀಗಾಗಿ 52.25ಕೋಟಿ ರೂ. ಬಾಕಿ ಪಾವತಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪೆನಿಯು ಮೈಶುಗರ್ ಕಾರ್ಖಾನೆಗೆ ನೋಟಿಸ್ ನೀಡಿತ್ತು. ರೈತರ ಹಿತದೃಷ್ಟಿಯಿಂದ ಕಾರ್ಖಾನೆ ಉಳಿಸಿಕೊಳ್ಳುವುದು ಅವಶ್ಯವಾಗಿದ್ದು, ವಿದ್ಯುತ್ ಬಿಲ್ ಮನ್ನಾ ಮಾಡಬೇಕೆಂದು ಕೋರಿ ದಿನೇಶ್ ಗೂಳಿಗೌಡ, ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದರು.